Elephant Balarama: ಮರಳಿ ಬಾರದ ಲೋಕಕ್ಕೆ ತೆರಳಿದ ಬಲರಾಮ : ಸಾವಿರಾರು ಜನರ ಕಂಬನಿ

Elephant Balarama of Mysore Dasara Fame no more

Elephant Balarama: ಬೆಂಗಳೂರು : ಜಗದ್ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತ ಬಲರಾಮ (67ವ.)ಆನೆ ಮೃತಪಟ್ಟಿದ್ದಾನೆ.

ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ (Elephant Balarama) ನಾಗರಹೊಳೆ ಉದ್ಯಾನದ ಹುಣಸೂರು ವಲಯದ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಕಳೆದ ಕಳೆದ ಹತ್ತು ದಿನಗಳಿಂದ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿದ್ದ ಬಲರಾಮನಿಗೆ ಟಿ.ಬಿ.ಇರಬಹುದೆಂದು ವೈದ್ಯರು ಶಂಕೆ ವ್ಯಕ್ತಪಡಿಸಿದ್ದರು.

ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.ಆಹಾರ ಸೇವನೆ ಮಾಡಲು ಆಗದಂತಹ ಸ್ಥಿತಿ ಉಂಟಾಗಿದ್ದರಿಂದ ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಚಿಕಿತ್ಸೆ ನೀಡುತ್ತಿದ್ದರು.

ನಾಗರಹೊಳೆ ಅಭಯಾರಣ್ಯ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್‌ಎಫ್‌ಓ ರತ್ನಾಕರ್, ಡಿಆರ್‌ಎಫ್‌ಓ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕಾವಾಡಿ ಮಂಜನಾಥ ಹಾಗೂ ಸಿಬಂದಿ ಸ್ಥಳದಲ್ಲೇ ಇದ್ದು, ಅಸ್ವಸ್ಥ ಬಲರಾಮನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದರು.

ಇದನ್ನೂ ಓದಿ: EPFO: ನಿವೃತ್ತಿಯ ನಂತರ ಮಾಸಿಕ ಪಿಂಚಣಿಯಾಗಿ 15,670 ರೂ. ಪಡೆಯುವುದು ಹೇಗೆ? ಇಪಿಎಫ್ ಹಿಂಪಡೆಯುವುದು ಹೇಗೆ? ಸಂಪೂರ್ಣ ವಿವರ ಇಲ್ಲಿದೆ

Leave A Reply

Your email address will not be published.