Home Education Karnataka SSLC Result 2023: ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ! ಈ ರೀತಿ ಒಂದೇ ಕ್ಲಿಕ್‌ ಮೂಲಕ...

Karnataka SSLC Result 2023: ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ! ಈ ರೀತಿ ಒಂದೇ ಕ್ಲಿಕ್‌ ಮೂಲಕ ರಿಸಲ್ಟ್‌ ಚೆಕ್‌ ಮಾಡಿ!

Karnataka SSLC Result 2023
Image Credit Source : India TV News

Hindu neighbor gifts plot of land

Hindu neighbour gifts land to Muslim journalist

Karnataka SSLC Result 2023: ಬಹಳ ಕಾತುರದಿಂದ ಕಾಯುತ್ತಿದ್ದ, ವಿದ್ಯಾರ್ಥಿಗಳ ಜೀವನದ ದೊಡ್ಡ ಮೈಲಿಗಲ್ಲು ಎಂದೇ ಪರಿಗಣಿಸಲಾದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ (SSLC Exam Result) ಇಂದು ಮೇ08 ರಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದೆ. ಅನಂತರ ಇಂದು ಬೆಳಗ್ಗೆ 11ಗಂಟೆ ನಂತರ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ (Karnataka SSLC Result 2023) ಪ್ರಕಟವಾಗಲಿದೆ.

ಎಲೆಕ್ಷನ್ ರಿಸಲ್ಟ್‌ಗೂ ಎರಡು ದಿನ ಮೊದಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು https://kseab.karnataka.gov.in/ ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪರಿಶೀಲನೆ ಮಾಡುವ ವಿಧಾನ ಹೀಗಿದೆ:
# ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಅಥವಾ karresults.nic.in ಗೆ ಭೇಟಿ ನೀಡಬೇಕು.
# ಈ ಪೇಜ್‌ ಓಪನ್ ಆದ ಬಳಿಕ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
# ಆ ಬಳಿಕ, ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್‌ ಮಾಡಬೇಕು.
# ‘Submit’ ಎಂಬಲ್ಲಿ ಕ್ಲಿಕ್ ಮಾಡಿಕೊಂಡರೆ ಫಲಿತಾಂಶದ ಪೇಜ್‌ ಓಪನ್‌ ಆಗುತ್ತದೆ.
# ಈ ಕಾಪಿ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್ ತೆಗೆದುಕೊಂಡರೆ ಒಳ್ಳೆಯದು.

ಇದನ್ನೂ ಓದಿ: ಪ್ರವಾಸಿಗರ ಬೋಟ್ ಪಲ್ಟಿಯಾಗಿ ಆರು ಮಕ್ಕಳು ಸೇರಿದಂತೆ, ಒಟ್ಟು 15 ಜನರ ದುರ್ಮರಣ!