

Malappuram : ಮಲಪ್ಪುರಂ (Malappuram) ಜಿಲ್ಲೆಯ ತಿರೂರು ತಾಲೂಕಿನ ತಾನೂರ್ ಬಳಿ ಬೋಟ್ ಪಲ್ಟಿಯಾಗಿ 15 ಜನರು ಮೃತಪಟ್ಟಿದ್ದಾರೆ. ಇವರಲ್ಲಿ ಆರು ಮಕ್ಕಳು, ಮಹಿಳೆಯರು ಸೇರಿದ್ದೂ, ಒಟ್ಟು 15 ಜನರು ದುರ್ಮರಣ ಹೊಂದಿದ್ದಾರೆ ಎಂದು ಸಚಿವ ವಿ ಅಬ್ದುರಾಹಿಮಾನ್ ದೃಢಪಡಿಸಿದ್ದಾರೆ. ತೂವಲ್ ತೀರ್ಥಂ ಪ್ರವಾಸಿ ತಾಣದ ಪುರಪುಜಾ ನದಿಯಲ್ಲಿ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಸುಮಾರು 30ರಿಂದ 40ಕ್ಕೂ ಹೆಚ್ಚು ಪ್ರವಾಸಿಗರಿದ್ದ ಬೋಟ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದ್ದೂ, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಅಗ್ನಿಶಾಮಕ ದಳ, ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ದೋಣಿ ದಡದಿಂದ 300 ಮೀಟರ್ ದೂರಲ್ಲಿದೆ.
ದೋಣಿಯಲ್ಲಿದ್ದ ಪ್ರಯಾಣಿಕರು ಮಲಪ್ಪುರಂ ಜಿಲ್ಲೆಯ ಪರಪ್ಪನಂಗಡಿ ಮತ್ತು ತನೂರ್ ಪ್ರದೇಶದವರು ಎಂದು ಪತ್ತೆ ಹಚ್ಚಲಾಗಿದೆ.
ಬೋಟ್ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಜೀವ ರಕ್ಷಕ ಸಾಧನಗಳು ಇರಲಿಲ್ಲವೆಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಟೈಮ್ಸ್ ನೌ ವರದಿ ಪ್ರಕಾರ, ಈವರೆಗೆ ಸುಮಾರು 10 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಮರಳಿ ಬಾರದ ಲೋಕಕ್ಕೆ ತೆರಳಿದ ಬಲರಾಮ : ಸಾವಿರಾರು ಜನರ ಕಂಬನಿ












