KCET 2023 Admit Card : ಕರ್ನಾಟಕ ಸಿಇಟಿ ಪ್ರವೇಶ ಪತ್ರ ಬಿಡುಗಡೆ; ಪರೀಕ್ಷೆ ಯಾವಾಗ ಆರಂಭ? ಹಾಲ್ ಟಿಕೆಟ್ ಡೌನ್ಲೋಡ್ ಮಾಡುವ ವಿಧಾನ ಇಲ್ಲಿದೆ

KCET 2023 Admit Card Released at kea.kar.nic.in

KCET 2023 Admit Card: ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸಾಮಾನ್ಯ ಪ್ರವೇಶ ಪರೀಕ್ಷೆ 2023 (KCET 2023) ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ ಕೋರ್ಸ್ಗಳು, ಬಿ.ಫಾರ್ಮ್ ಇತ್ಯಾದಿ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆ ಅರ್ಜಿ ಭರ್ತಿ ಮಾಡುವ ಸಲುವಾಗಿ ಮಾರ್ಗ ಸೂಚನೆಗಳನ್ನು ಬಿಡುಗಡೆ ಮಾಡಿತ್ತು. ಇದೀಗ ಸಿಇಟಿ ಪ್ರವೇಶ ಪತ್ರ (KCET 2023 Admit Card) ಬಿಡುಗಡೆ ಮಾಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ನೋಂದಾವಣೆ ಮಾಡಿರುವ ಅಭ್ಯರ್ಥಿಗಳಿಗಾಗಿ ಸಿಇಟಿ 2023 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ https://cetonline.karnataka.gov.in/kea/ ಅಥವಾ http://kea.kar.nic.in ಗೆ ಭೇಟಿ ನೀಡುವ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೆಇಎ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಸರ್ಕಾರದ ನಿರ್ದೇಶನದಂತೆ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಸಿಇಟಿ-2023 ಪರೀಕ್ಷೆಯನ್ನು ನಿಗದಿತ ದಿನಾಂಕದಂದು ನಡೆಸಲಾಗುವುದು. 20-05-2023 ಮತ್ತು 21-05-2023 ರಂದು ಪ್ರವೇಶ ಪರೀಕ್ಷೆಗಳನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ 22-05-2023 ರಂದು ನಡೆಸಲಾಗುವುದು ಎಂದು ತಿಳಿಸಿದೆ.

KCET 2023 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?

• ಕೆಇಎ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಿ.
• KCET 2023 ಹಾಲ್ ಟಿಕೆಟ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಅಭ್ಯರ್ಥಿಗಳು ನಿಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಲಾಗಿನ್ ಆಗಿ.
• ಪರದೆಯ ಮೇಲೆ ನಿಮ್ಮ ಹಾಲ್‌ ಟಿಕೆಟ್‌ ಕಾಣಸಿಗುತ್ತದೆ.
• ಡೌನ್‌ಲೋಡ್‌ ಮಾಡಿ, ಪ್ರಿಂಟ್‌ಔಟ್‌ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೊಡ್‌ ಮಾಡಿಕೊಂಡ ಮೇಲೆ ಹಾಲ್ ಟಿಕೆಟ್ ನಲ್ಲಿನ ಮಾರ್ಗದರ್ಶನಗಳನ್ನು ತಪ್ಪದೆ ಅನುಸರಿಸಬೇಕು. ಹಾಗೂ ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿತ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.

ಇದನ್ನೂ ಓದಿ:Murder of a BJP worker: ಬಿಜೆಪಿ ಕಾರ್ಯಕರ್ತನ ಕೊಲೆ! ದೇವಸ್ಥಾನದಲ್ಲೇ ಕಾದು ಕುಳಿತಿದ್ದ ಹಂತಕರು!!!

Leave A Reply

Your email address will not be published.