Vivek Ranjan Agnihotri: ‘ದಿ ಕೇರಳ ಸ್ಟೋರಿ’ ತಂಡಕ್ಕೆ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕನಿಂದ ಖಡಕ್ ಎಚ್ಚರಿಕೆ! ‘ಊಹಿಸಲಾಗದ ದ್ವೇಷ ಅನುಭವಿಸ್ತೀರಿ’ ಎಂದ ವಿವೇಕ್ ಅಗ್ನಿಹೋತ್ರಿ!

Vivek Ranjan Agnihotri warning for the Kerala story team

Vivek Ranjan Agnihotri :ದೇಶಾದ್ಯಂತ ಭಾರೀ ಚರ್ಚೆ ಹುಟ್ಟಾಕ್ಕಿರುವ ‘ದಿ ಕೇರಳ ಸ್ಟೋರಿ'(The Kerala Story) ನಿಧಾನವಾಗಿ ಸದ್ದು ಮಾಡಲು ಆರಂಭಿಸಿದೆ. ಈಗಾಗಲೇ ಕೆಲವೆಡೆ ಸಿನಿಮಾ ಪ್ರದರ್ಶನ ನಿಲ್ಲಿಸಲಾಗುತ್ತಿದೆ. ಆದರೂ ಕೂಡ ಪ್ರೇಕ್ಷಕರು ಸಿನಿಮಾ ನೋಡಲು ಮುಗಿಬೀಳುತ್ತಿದ್ದಾರೆ. ಮೊದಲ ದಿನ ಸಾಧಾರಣ ಓಪನಿಂಗ್ ಪಡೆದುಕೊಂಡಿದ್ದ ಸಿನಿಮಾ ಶನಿವಾರ, ಭಾನುವಾರ ಚೇತರಿಸಿಕೊಂಡಿದೆ. ಇದು ಮತ್ತೊಂದು ‘ಕಾಶ್ಮೀರ್ ಫೈಲ್ಸ್'(The Kashmir Files) ಆಗುವ ಸುಳಿವು ಸಿಗುತ್ತಿದೆ. ಈ ನಡುವೆ ಇದೀಗ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ(Vivek Ranjan Agnihotri) ಶಾಕಿಂಗ್ ಸ್ಟೇಟ್​ಮೆಂಟ್ ಕೊಟ್ಟಿದ್ದು, ದಿ ಕೇರಳ ಸ್ಟೋರಿ ಚಿತ್ರ ತಂಡಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

 

ಸಿನಿಮಾ ಬಗ್ಗೆ ಮಾತಾಡಿ ವಿವೇಕ್ ಅಗ್ನಿಹೋತ್ರಿ, ದಿ ಕೇರಳ ಸ್ಟೋರಿ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ದಿ ಕೇರಳ ಸ್ಟೋರಿ ಬಿಡುಗಡೆ ನಂತರ ನಿರ್ದೇಶಕ ಅಗ್ನಿಹೋತ್ರಿ ಟ್ವಿಟರ್​ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಚಿತ್ರದ ನಿರ್ಮಾಪಕ ವಿಪುಲ್ ಶಾ(Viphul Sha), ನಿರ್ದೇಶಕ ಸುದೀಪ್ತೋ ಸೇನ್(Sudeeptho Sen) ಮತ್ತು ನಟ ಅದಾ ಶರ್ಮಾ(Ada Sharma) ಅವರಿಗೆ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿನಿಮಾ ಬಳಿಕ ನಿಮ್ಮ ಜೀವನ ಕೂಡ ಬದಲಾಗಲಿದೆ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.

ಹೌದು, The Kerala Storyತಂಡ, ಮೊದಲು ನಾನು ನಿಮ್ಮ ಧೈರ್ಯಶಾಲಿ ಪ್ರಯತ್ನಕ್ಕಾಗಿ ಅಭಿನಂದಿಸುತ್ತೇನೆ. ಅದೇ ಸಮಯದಲ್ಲಿ ನಾನು ನಿಮಗೆ ಕೆಟ್ಟ ಸುದ್ದಿಯನ್ನು ನೀಡುತ್ತೇನೆ, ಇಲ್ಲಿಂದ ಇನ್ಮುಂದೆ ನಿಮ್ಮ ಜೀವನವು ಒಂದೇ ಆಗಿರುವುದಿಲ್ಲ. ನೀವು ಊಹಿಸಲಾಗದ ದ್ವೇಷವನ್ನು ಸ್ವೀಕರಿಸುತ್ತೀರಿ. ನೀವು ಉಸಿರುಗಟ್ಟಿದ ಅನುಭವ ಪಡೆಯುತ್ತೀರಿ. ಅನೇಕ ಬಾರಿ ನೀವು ಗೊಂದಲಕ್ಕೊಳಗಾಗಬಹುದು ಮತ್ತು ಖಿನ್ನತೆಗೆ ಒಳಗಾಗಬಹುದು’ ಎಂದು ಹೇಳಿದ್ದಾರೆ.

ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಬಾಲಿವುಡ್(Bollywood) ನಟಿ ಅದಾ ಶರ್ಮಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೆಲಸ ಹುಡುಕಿ ಬೇರೆ ದೇಶಗಳಿಗೆ ಹೋಗುವ ಕೇರಳದ ಅನೇಕ ಯುವತಿಯರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರುವಂತೆ ಬ್ರೈನ್ ವಾಶ್ ಮಾಡಲಾಗುತ್ತದೆ ಹಾಗೂ ಮತಾಂತರದ ಬಗ್ಗೆ ಈ ಸಿನಿಮಾದಲ್ಲಿ ತೋರಸಲಾಗಿದೆ. ಈ ವಿಚಾರಕ್ಕೆ ಅನೇಕರು ವಿರೋಧ ವ್ಯಕ್ತ ಪಡಿಸಿದ್ದರು. ವಿರೋಧದ ನಡುವೆಯೂ ತೆರೆಗೆ ಬಂದ ಸಿನಿಮಾ ನೋಡಿ ಪ್ರೇಕ್ಷಕರು ಸಾಮಾಜಿಕ ಜಾಲತಾಣದ ಮೂಲಕ ವಿಮರ್ಶೆ ತಿಳಿಸುತ್ತಿದ್ದಾರೆ.

ಅಂದಹಾಗೆ ಮತ್ತೊಂದು ‘ಕಾಶ್ಮೀರ್ ಫೈಲ್ಸ್'(The Kashmiri files) ಆಗುವ ಸುಳಿವು ನೀಡುತ್ತಿರೋ ‘ದಿ ಕೇರಳ ಸ್ಟೋರಿ’ ವಿವಾದದ ನಡುವೆಯೇ ರಿಲೀಸ್ ಆದ ಮೊದಲ ದಿನದ (ಶುಕ್ರವಾರ) ಗಳಿಕೆ 8.03 ಕೋಟಿ ರೂ., ಎರಡನೇ ದಿನ (ಶನಿವಾರ) ಗಳಿಕೆ 11.22 ಕೋಟಿ ರೂಪಾಯಿ ಮೂರನೇ ದಿನ (ರವಿವಾರ) ಗಳಿಕೆ 16 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಮೂರು ದಿನದ ಒಟ್ಟು ಆದಾಯ 35.25 ಕೋಟಿ ಎಂದು ಅಂದಾಜಿಸಲಾಗಿದೆ.

ಕೇರಳ ಸ್ಟೋರಿ’ ಯು ಕೇರಳದಲ್ಲಿ ಬಲವಂತವಾಗಿ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡಿ ಅವರನ್ನು ಭಯೋತ್ಪಾದನೆಗೆ ದೂಡಲಾಗುತ್ತಿದೆ ಎನ್ನುವ ವಿಚಾರವನ್ನಿಟ್ಟುಕೊಂಡು ನಿರ್ಮಿಸಿದ ಸಿನಿಮಾ ಆಗಿದೆ. ವ್ಯವಸ್ಥಿತ ಮತಾಂತರ ಸುತ್ತಾ ಈ ಸಿನಿಮಾ ಕಥೆ ಸುತ್ತುತ್ತದೆ.

ಇದನ್ನೂ ಓದಿ:The Kerala story : ಬಾಕ್ಸಾಫೀಸ್‌ನಲ್ಲಿ ಆರ್ಭಟಿಸುತ್ತಿದೆ ‘ದಿ ಕೇರಳ ಸ್ಟೋರಿ’! 3 ದಿನಕ್ಕೆ ಈ ವಿವಾದಾತ್ಮಕ ಚಿತ್ರ ಗಳಿಸಿದ್ದೆಷ್ಟು?

Leave A Reply

Your email address will not be published.