Karnataka election: ವಿಧಾನಸಭಾ ಚುನಾವಣೆ : 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ | ಶನಿವಾರ ಮಧ್ಯಾಹ್ನ ವೇಳೆಗೆ ಬಹುತೇಕ ಫಲಿತಾಂಶ
Karnataka election results date 2023
Karnataka election results : ಬೆಂಗಳೂರು: ವಿಧಾನಸಭೆ ಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ.ರಾಜ್ಯದಲ್ಲಿ ಸರಾಸರಿ ಶೇ. 72.67 ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾನ ಪ್ರಕ್ರಿಯೆ ಪೂರ್ಣಗೊಂಡು 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಿದಂತಾಗಿದೆ.
ರಾಜ್ಯದ 224 ಕ್ಷೇತ್ರಗಳ 58,545 ಮತಗಟ್ಟೆಗಳಲ್ಲೂ ಮತದಾನ ನಡೆದಿದೆ. ಈ ಬಾರಿ ಎಲ್ಲೂ ಮರು ಮತದಾನ ಇಲ್ಲದಿರುವುದು ವಿಶೇಷ. ಗ್ರಾಮೀಣ ಭಾಗಕ್ಕೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನ ಕಂಡುಬಂದಿದೆ.
ಶನಿವಾರ ಮತ ಎಣಿಕೆ
ಮೇ.13 ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಬಹುತೇಕ ಫಲಿತಾಂಶ (Karnataka election results ) ಹೊರಬೀಳುವ ಸಾಧ್ಯತೆಯಿದೆ. ಈ ಬಾರಿ ಯಾರು ಸರ್ಕಾರ ರಚಿಸಲಿದ್ದಾರೆ ಎಂಬ ಕುತೂಹಲಕ್ಕೆ ಶನಿವಾರ ತೆರೆ ಬೀಳಲಿದೆ.
ಇದನ್ನೂ ಓದಿ:ತಾಯಿ ಆನೆಯಿಂದ ಬೇರ್ಪಟ್ಟಿದ್ದ ಮರಿಯಾನೆ ಸಾವು