HD Kumaraswamy: “ಮೈತ್ರಿಗೆ ನಾವು ಸಿದ್ಧ” ಕಡ್ಡಾಯವಾಗಿ ಈ ಷರತ್ತು ಅನ್ವಯ: ಹೆಚ್‌ಡಿಕೆ!

HD Kumaraswamy green signal on coalition govt JDS alliance with conditions

JDS alliance: ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections 2023) ಮತದಾನ(Voting) ಮುಗಿದಿದ್ದು ಕೆಲವೇ ಗಂಟೆಗಳಲ್ಲಿ ರಾಜಕೀಯ ನಾಯಕರ ಭವಿಷ್ಯ ಹೊರಬೀಳಲಿದೆ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಇಲ್ಲ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳ ಮೂಲಕ ತಿಳಿದು ಬಂದಿದೆ. ಆದ್ದರಿಂದ ಕೊನೆಗೆ ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಪಕ್ಷದ ಮೊರೆ ಹೋಗಬೇಕೆಂದು ಬಿಜೆಪಿ, ಕಾಂಗ್ರೆಸ್ ಒಳಗೊಳಗೆ ಕಸರತ್ತು ಶುರು ಮಾಡಿದೆ.

ಇನ್ನು ಇತ್ತ ಕಡೆ ಮೈತ್ರಿ ಸರ್ಕಾರ ನಡೆಸಲು ಕುಮಾರಣ್ಣನ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಂಡ ಹಾಗೆ ಮೇಲ್ನೋಟಕ್ಕೆ ಕಾಣಿಸುತ್ತಿದೆ. ಇಬ್ಬರ ಜಗಳ ಮೂರನೇ ಯವನಿಗೆ ಲಾಭ ಅನ್ನುವ ಗಾದೆ ಹಾಗೇ, ಕುಮಾರಣ್ಣ ಸಮ ಪಾಲು ಮಾಡಲು ಹೊರಟಿದ್ದಾರೆ.

ಸದ್ಯ ಕುಮಾರಣ್ಣನ (HD Kumaraswamy) ಪ್ರಕಾರ, ನನಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಯಾವ ಪಕ್ಷ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದನ್ನು ನಿರ್ಧರಿಸುತ್ತೇವೆ. ಮೈತ್ರಿಗೆ ನಾವು ಸಿದ್ಧ ಎಂದು ಹೆಚ್​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಿಂಗಾಪುರಕ್ಕೆ ತೆರಳುವ ಮೊದಲು ಹೆಚ್​ಡಿ ಕುಮಾರಸ್ವಾಮಿ ಮಾದ್ಯಮವೊಂದಕ್ಕೆ ಸಂದರ್ಶನ ನೀಡಿದ್ದು, ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಜೆಡಿಎಸ್ (JDS alliance) ಮಾಡಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಹಲವು ಸಮೀಕ್ಷೆಗಳು ಜೆಡಿಎಸ್ ಪಾರ್ಟಿಗೆ ಬಹಳ ಕಡಿಮೆ ಸೀಟ್​ಗಳು ಸಿಗುತ್ತವೆ ಎಂದು ತಿಳಿಸಿವೆ. ಆದ್ರೆ ನನಗೆ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.
ಇನ್ನು ಸಮ್ಮಿಶ್ರ ಸರ್ಕಾರಗಳ ಅಡಿಯಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾದಾಗ, ಒಮ್ಮೆ ಬಿಜೆಪಿ (2006) ಮತ್ತು ನಂತರ ಕಾಂಗ್ರೆಸ್ (2018) ನೊಂದಿಗೆ ಕುಮಾರಸ್ವಾಮಿ ಅವರು ಎದುರಿಸಿದ ಬಿಕ್ಕಟ್ಟುಗಳಿಂದಾಗಿ ಕುಮಾರಸ್ವಾಮಿ ಅವರು ಈ ಬಾರಿ ನಿಟ್ಟ ನಿಲುವನ್ನು ಹೊಂದಿದ್ದಾರೆ. ಹೀಗಾಗಿ ಈ ಬಾರಿ ಮೈತ್ರಿಗೆ ಸಹಿ ಹಾಕುವ ಮೊದಲು ಅವರ ಕೆಲವು ಷರತ್ತುಗಳನ್ನು ಪೂರೈಸಲಾಗುತ್ತದೆಯೇ ಎಂದು ಖಚಿತಪಡಿಸಿಕೊಂಡ ನಂತರವೇ ಆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದು ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ನಿರ್ದಿಷ್ಟವಾಗಿ ಹೇಳುವುದಾದರೆ, ಮುಖ್ಯಮಂತ್ರಿಯಾಗಿ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರವನ್ನು ನಡೆಸಲು ಅವರಿಗೆ ಸ್ವತಂತ್ರ ನೀಡಬೇಕು. ಯಾರ ಅಪ್ಪಣೆಯೂ ತೆಗೆದುಕೊಳ್ಳುವಂತಿರಬಾರದು. ಹಾಗೂ ಯಾರು ಹಿಡಿತ ಸಾಧಿಸಬಾರದು ಎಂಬುವುದು ಕುಮಾರಸ್ವಾಮಿಯವರ ಷರತ್ತು ಆಗಿದೆ.

ಇನ್ನು ಜೆಡಿಎಸ್ ಶಾಸಕರು ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂದು ಕುಮಾರಸ್ವಾಮಿ ಬಯಸುತ್ತಾರೆ. ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು ಎಂದು ಹೆಚ್​ಡಿ ಕುಮಾರಸ್ವಾಮಿ ತಮ್ಮ ಷರತ್ತುಗಳ ಬಗ್ಗೆ ವಿವರಿಸಿದ್ದಾರೆ.

ಕುಮಾರಸ್ವಾಮಿ ಅವರಿಗೆ 2018ರಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿದಾಗ ರಚನೆಯಾದ ಸಮ್ಮಿಶ್ರ ಸಮನ್ವಯ ಸಮಿತಿ ಬೇಕಿಲ್ಲವಂತೆ. ಹಾಗೂ ತಮ್ಮ ಸಮ್ಮಿಶ್ರ ಪಾಲುದಾರ ಪಕ್ಷವು ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಂದ ದೂರವಿರಬೇಕು. ಯಾವುದೇ ಸಿದ್ಧಾಂತಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಚರ್ಚೆಯಿಲ್ಲದೆ ಮಾಡಬಾರದು ಎಂದು ಕುಮಾರಸ್ವಾಮಿ ತಮ್ಮ ಷರತ್ತುಗಳನ್ನು ತಿಳಿಸಿದ್ದಾರೆ.

ಜೆಡಿಎಸ್ ಮೂಲಗಳ ಪ್ರಕಾರ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಸಮ್ಮಿಶ್ರ ರಚನೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ: Yash- Shah Rukh Khan: ಯಶ್ ಮತ್ತು ಶಾರುಖ್ ಗೆ ಇರುವ ಹೋಲಿಕೆ ಏನು ಗೊತ್ತಾ?

Leave A Reply

Your email address will not be published.