KPSC Departmental Examination: KPSC ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ ಮುಂದೂಡಿಕೆ !!

KPSC Departmental Examination Postponement

KPSC Departmental Examination: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ ಇಲ್ಲಿ ನೀಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು (KPSC) 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಆದರೆ, ಇದೀಗ ಈ ಪರೀಕ್ಷೆಗಳನ್ನು (KPSC Departmental Examination) ಮುಂದೂಡಿದೆ.

 

ಈ ಮೊದಲು ಏಪ್ರಿಲ್‌ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಕಟಿಸಲಾಗಿತ್ತು. ಆದರೆ, ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿದ್ದು, ಮೇ. 19 ರಿಂದ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಕಟಿಸಲಾಗಿತ್ತು. ಈ ಪರೀಕ್ಷೆಗೆ ಸಂಬಂಧಿಸಿದಂತೆ ಜನವರಿ 6 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಅರ್ಜಿ ಸಲ್ಲಿಸಿರುವ ಸರ್ಕಾರಿ ನೌಕರರು (ಗ್ರೂಪ್‌-ಡಿ ನೌಕರರು ಹೊರತುಪಡಿಸಿ), ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ/ ಪ್ರಾಧಿಕಾರಗಳ ಕಾಯಂ ನೌಕರರು ಈ ಪರೀಕ್ಷೆ ಬರೆಯಬೇಕಿದೆ.

ಅಧಿಸೂಚನೆಯಲ್ಲಿ ಆನ್‌ಲೈನ್‌ ಮಾದರಿಯ ಕಂಪ್ಯೂಟರ್‌ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಲಾಗಿತ್ತು. ಆದರೆ, ಈಗ ಕೆಪಿಎಸ್‌ಸಿಯು ಆಫ್‌ಲೈನ್‌ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಇಲಾಖಾ ಪರೀಕ್ಷೆಯನ್ನು ಒಟ್ಟು ಎರಡು ಹಂತದಲ್ಲಿ ನಡೆಸಲಾಗುತ್ತದೆ. ಪ್ರಥಮ ಹಂತದ ಪರೀಕ್ಷೆಯನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಎರಡನೇ ಹಂತದ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.

ʻʻಕಾರಣಾತಂತರಗಳಿಂದ ಪರೀಕ್ಷಾ ದಿನಾಂಕಗಳನ್ನು ಬದಲಾವಣೆ ಮಾಡಲಾಗಿದೆ. ಮುಂದೆ ಆಫ್‌ಲೈನ್‌ ಮಾದರಿಯಲ್ಲಿಯೇ ಪರೀಕ್ಷೆ ನಡೆಸಲಾಗುವುದು. ಶೀಘ್ರದಲ್ಲೇ ಪರಿಷ್ಕೃತ ವೇಳಾಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದುʼʼ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಸುರಳ್ಕರ್‌ ವಿಕಾಸ್‌ ಕಿಶೋರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ವಿಷಯಗಳ ಬಹುಆಯ್ಕೆ ಮಾದರಿಯ ಒಟ್ಟು 99 ಪತ್ರಿಕೆಗಳಿಗೆ ಹಾಗೂ ವಿವರಣಾತ್ಮಕ ಮಾದರಿಯ ಒಟ್ಟು 19 ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಈ ಇಲಾಖಾ ಪರೀಕ್ಷೆಗಳ ಬಗ್ಗೆ ಕೆಲವು ಇಲಾಖೆಗಳ ಪಠ್ಯಕ್ರಮಗಳು ಬದಲಾವಣೆ ಆಗಿದೆ. ಈ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ವೆಬ್‌ಸೈಟ್‌ ವಿಳಾಸ: https://kpsc.kar.nic.in/

 

ಇದನ್ನು ಓದಿ: Dowry: ಬೈಕ್ ವರದಕ್ಷಿಣೆ ಕೇಳಿದ ಮಗನಿಗೆ ಸಾಕು ಸಾಕು ಅನ್ನುವಷ್ಟು ಥಳಿಸಿದ ತಂದೆ! 

Leave A Reply

Your email address will not be published.