PM Kisan Yojana: ಪಿಎಂ ಕಿಸಾನ್ 14ನೇ ಕಂತಿನ ಮೊತ್ತ ಪಡೆಯಲು ಯಾರು ಅರ್ಹರಲ್ಲ? ಸಂಪೂರ್ಣ ಮಾಹಿತಿ ಇಲ್ಲಿದೆ

PM Kisan Yojana-14th Installment : which farmers are not eligible for the benefit

PM Kisan Yojana-14th Installment: ದೇಶದ ರೈತರನ್ನು (Farmers) ಆರ್ಥಿಕವಾಗಿ ಸದೃಢವಾಗಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಹೀಗಾಗಿ, ರೈತರ ನೆರವಿಗೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಆರ್ಥಿಕ ನೆರವಿನ ಜೊತೆಗೆ ರಸಗೊಬ್ಬರ ಪೂರೈಕೆ ಮಾಡಿ ಕೃಷಿ ಚಟುವಟಿಕೆಗಳಿಗೆ (Agriculture Activity) ಪ್ರೋತ್ಸಾಹ ನೀಡುತ್ತಾ ಬಂದಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Yojana) ಮೂಲಕ ಆರ್ಥಿಕ ನೆರವನ್ನು ಕೂಡ ನೀಡುತ್ತಿರುವುದು ಗೊತ್ತಿರುವ ಸಂಗತಿ.

ರೈತರ ನೆರವು ನೀಡುವಲ್ಲಿ ಬಹಳ ಜನಪ್ರಿಯವಾಗಿರುವ (Popular Scheme For Farmers) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi) ಕೇಂದ್ರ ಸರ್ಕಾರ ಇಲ್ಲಿಯವರೆಗೆ 2,000 ರೂಗಳ 13 ಕಂತುಗಳನ್ನು ಬಿಡುಗಡೆ ಮಾಡಿದೆ. 2019ರ ಫೆಬ್ರವರಿಯಲ್ಲಿ ಜಾರಿ ಮಾಡಿದ ಅನುಸಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದಾಗಿದ್ದು, ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣ ರೈತರ ಖಾತೆಗೆ ಬಿಡುಗಡೆ ಮಾಡಿದೆ.

ಈ ಯೋಜನೆಯ ಭಾಗವಾಗಿ ಇದುವರೆಗೆ 10 ಕೋಟಿಗೂ ಹೆಚ್ಚು ರೈತರು 12 ಕಂತುಗಳನ್ನು ಪಡೆದಿದ್ದಾರೆ. ಈ ಮೊತ್ತವನ್ನು ಪ್ರತಿ 4 ತಿಂಗಳಿಗೊಮ್ಮೆ ಪ್ರತಿ ವ್ಯಕ್ತಿಗೆ 2,000 ರೂ.ನಂತೆ ಮೂರು ಕಂತುಗಳಲ್ಲಿ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಇದರ ಜೊತೆಗೆ ಯೋಜನೆಯ ಭಾಗವಾಗಿ ವಾರ್ಷಿಕ 6 ಸಾವಿರ ರೂಪಾಯಿ ರೈತರ ಖಾತೆಗೆ ರವಾನೆ ಮಾಡಲಾಗಿದೆ.

ಇದೀಗ ಈ ಯೋಜನೆಯ 14 ನೇ ಕಂತಿನ ಹಣಕ್ಕಾಗಿ ಜನರು ಕಾತುರದಿಂದ ಕಾದು ಕುಳಿತಿದ್ದಾರೆ. ಮೇ ತಿಂಗಳ ಅಂತ್ಯದಲ್ಲಿ 14ನೇ ಕಂತಿನ ಪಿಎಂ ಕಿಸಾನ್ ನಿಧಿ (PM Kisan Yojana-14th Installment) ಮೊತ್ತವನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ತಮ್ಮ ಹೆಸರಿನಲ್ಲಿ ಸಾಗುವಳಿ ಭೂಮಿ ಹೊಂದಿರುವ, ಜಮೀನು ಹೊಂದಿರುವ ರೈತರು ಈ ಯೋಜನೆಯಡಿ ಲಾಭ ಪಡೆಯಬಹುದಾಗಿದೆ. ಆದರೆ 14ನೇ ಕಂತಿನ ಪಿಎಂ ಕಿಸಾನ್ ಮೊತ್ತ ಪಡೆಯಲು ಕೆಲವರು ಅರ್ಹತೆಯನ್ನು ಹೊಂದಿಲ್ಲ.

ಪಿಎಂ ಕಿಸಾನ್ ಯೋಜನೆಗೆ ಯಾರು ಅರ್ಹರಲ್ಲ?
• ಸಾಂಸ್ಥಿಕ ಭೂಮಿಯನ್ನು ಹೊಂದಿರುವವರು (ವಸತಿ, ಮನೆ)
• ಸಾಂವಿಧಾನಿಕವಾಗಿ ಅರ್ಹತೆಯನ್ನು ಹೊಂದಿರುವ ರೈತ ಕುಟುಂಬಗಳು
• ರಾಜ್ಯ ಅಥವಾ ಕೇಂದ್ರ ಸರ್ಕಾರದ ಸೇವೆಯಲ್ಲಿರುವ ಅಥವಾ ನಿವೃತ್ತ ಅಧಿಕಾರಿಗಳು ಮತ್ತು ನೌಕರರು ರೈತ ಕುಟುಂಬಗಳು
• ವೈದ್ಯರು, ಎಂಜಿನಿಯರ್‌ಗಳು ಮತ್ತು ವಕೀಲರಂತಹ ವೃತ್ತಿಪರರು
• 10 ರೂಪಾಯಿಗಿಂತ ಅಧಿಕ ಮಾಸಿಕ ಪಿಂಚಣಿ ಹೊಂದಿರುವ ನಿವೃತ್ತ ಪಿಂಚಣಿದಾರರು.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ?
• ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ
• Farmer’s Corner ಗೆ ಹೋಗಿ ‘New Farmer Registration’ ಮೇಲೆ ಕ್ಲಿಕ್ ಮಾಡಿ
• ನೀವು ನಿಮ್ಮ ಎಲ್ಲಾ ಅವಶ್ಯಕ ವಿವರಗಳನ್ನು ನಮೂದಿಸಬೇಕು.
• ‘click here to continue’ ಆಯ್ಕೆ ಮೇಲೆ ಕ್ಲಿಕ್ ಮಾಡಿ
• ‘YES’ ಮೇಲೆ ಕ್ಲಿಕ್ ಮಾಡಿ ಪಿಎಂ ಕಿಸಾನ್ ರಿಜಿಸ್ಟ್ರೇಷನ್ ಫಾರ್ಮ್ 2023 ಅನ್ನು ಭರ್ತಿ ಮಾಡಿ
• ಸೇವ್ ಮಾಡಿ, ಪ್ರಿಂಟ್‌ ಔಟ್‌ ಅನ್ನು ತೆಗೆಯಿರಿ.

ಬೇಕಾದ ದಾಖಲೆಗಳು:
ಆಧಾರ್ ಕಾರ್ಡ್, ನಿಮ್ಮ ಹೆಸರಿನ ಜಾಗದ ಪತ್ರ, ನಾಗರಿಕ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಬ್ಯಾಂಕ್ ಖಾತೆಯ ವಿವರ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಪಾಸ್‌ಪೋರ್ಟ್ ಗಾತ್ರದ ಫೋಟೋ.

ಇದನ್ನೂ ಓದಿ:KPSC Departmental Examination : KPSC ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ ಮುಂದೂಡಿಕೆ !!

Leave A Reply

Your email address will not be published.