ಯುವತಿ ಜತೆ ಅಸಭ್ಯ ವರ್ತನೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಆಶಾ ತಿಮ್ಮಪ್ಪ , ಆರೋಪಿಗಳ ಬಂಧನಕ್ಕೆ ಆಗ್ರಹ

Asha Thimmappa: ವಿಟ್ಲದಲ್ಲಿ ಹಿಂದೂ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಶಾ ತಿಮ್ಮಪ್ಪ(Asha Thimmappa) ಅವರು ಪೊಲೀಸ್ ಠಾಣೆಗೆ ತೆರಳಿ ಆಗ್ರಹಿಸಿದ್ದಾರೆ.

 

ಇದಕ್ಕೆ ಮೊದಲು ಯುವತಿ ಮನೆಗೆ ತೆರಳಿ ಯುವತಿ ಹಾಗೂ ಪೋಷಕರಿಗೆ ಧೈರ್ಯ ತುಂಬಿದ್ದಾರೆ. ಬಡತನದಲ್ಲಿರುವ ಕುಟುಂಬಕ್ಕೆ ತನ್ನ ಕೈಲಾದ ಸಹಾಯ ನೀಡುವುದಾಗಿ ಭರವಸೆ ನೀಡಿರುವ ಅವರು, ಆ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವಂತೆ ಸ್ಥಳೀಯರಲ್ಲಿ ಮನವಿ ಮಾಡಿಕೊಂಡರು.

ಬಳಿಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಜೊತೆ ಮಾತುಕತೆ ನಡೆಸಿದರು. ಆರೋಪಿಗಳನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಇದನ್ನೂ ಓದಿ : ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣಗಳೇನು

Leave A Reply

Your email address will not be published.