Udupi: ಕುಂದಾಪುರ ಕಿರಣ್ ಕೊಡ್ಗಿ ಗೆಲುವು! ಉಡುಪಿಯಲ್ಲಿ ಐದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ
Udupi: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ಶಾಸಕರಾಗಿ ವಿಧಾನಸಭಾ ಕ್ಷೇತ್ರದ ಕಿರಣ್ ಅವರು ಆಯ್ಕೆಯಾಗಿದ್ದಾರೆ. ಅಂತಿಮವಾಗಿ 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಕಿರಣ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಸೋಲು ಕಂಡಿದ್ದಾರೆ.
ಈಗಾಗಲೇ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ಕಿರಣ್ ಕೊಡ್ಗಿ ಅವರಿಗೆ ಟಿಕೆಟ್ ನೀಡಲಾಗಿತ್ತು.
ಅದಲ್ಲದೆ ಉಡುಪಿ (Udupi)ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರಂಭಿಕ ಹಂತದಲ್ಲಿ ಉಡುಪಿ, ಕಾಪು, ಕುಂದಾಪುರ, ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದಕೊಂಡಿದ್ದು, ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿತ್ತು. ಪ್ರಸ್ತುತ ದೊರಕಿರುವ ಮಾಹಿತಿಯ ಪ್ರಕಾರ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಕಾಂಗ್ರೆಸ್‌ನ ಪ್ರಸಾದ್ ರಾಜ್ ಕಾಂಚನ್ ಬಾರೀ ಹಿನ್ನಡೆ ಅನುಭವಿಸಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥ ಉದಯ ಕುಮಾರ್ ಶೆಟ್ಟಿ ವಿರುದ್ಧ ಕಾರ್ಕಳ ಸುನಿಲ್ ಕುಮಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.ಕಾಪು ಸಚಿವ ವಿನಯ ಕುಮಾರ್ ಸೊರಕೆ ವಿರುದ್ದ ಸುರೇಶ್ ಶೆಟ್ಟಿ ಮುನ್ನಡೆ ಸಾಧಿಸಿದ್ದಾರೆ.
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಗೋಪಾಲ ಪೂಜಾರಿ ಅವರು, ಇದೀಗ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಸಾವಿರಕ್ಕೂ ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.