Lakshmi Hebbalkar: ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು

ಬೆಳಗಾವಿ  : ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಇಂದು ಮೇ.13ರಂದು ಮತ ಏಣಿಕೆ ನಡೆದಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು ಸಾಧಿಸಿದ್ದಾರೆ.

 

ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವೆ ಪೈಪೋಟಿ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಿ ರವೀಂದ್ರ ಹೆಬ್ಬಾಳ್ಕರ್, ಬಿಜೆಪಿಯ ನಾಗೇಶ್ ಮನೋಲ್ಕರ್ ಮತ್ತು ಜೆಡಿಎಸ್ ಪಕ್ಷದ ಶಂಕರಗೌಡ ರುದ್ರಗೌಡ ಪಾಟೀಲ್ ವಿಧಾನ ಸಭಾ ಚುನಾವಣಾ ಕಣದಲ್ಲಿದ್ದರು.

ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್ ಬರೋಬ್ಬರಿ 51,724 ಮತಗಳ ಅಂತರದಿಂದ ಸಂಜಯ್ ಬಿ ಪಾಟೀಲರನ್ನು ಸೋಲಿಸಿ ಕಾಂಗ್ರೆಸ್‌ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ.

Leave A Reply

Your email address will not be published.