V Somanna: ವರುಣಾದಲ್ಲಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸುತ್ತೇವೆ: ವಿ ಸೋಮಣ್ಣ
V Somanna : ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣಾ ಮತ ಏಣಿಕೆ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು,ವರುಣಾದಲ್ಲಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸುತ್ತೇವೆ ಎಂದು ವಿ ಸೋಮಣ್ಣ (V Somanna) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಇಂದು 224 ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ. ಈ ನಿಟ್ಟಿನಲ್ಲಿ ಕರ್ನಾಟಕ ವಿಧಾನ ಸಭೆ ಚುನಾವಣಾ ಮತ ಎಣೆಕೆ ಕಾರ್ಯ ನಡೆಯುತ್ತಿದ್ದಂತೆ ವಿ.ಸೋಮಣ್ಣಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು 40 ವರ್ಷ ಅನುಭವವನ್ನು ಹಂಚಿಕೊಂಡಿದ್ದೇನೆ. ಮನೆಮನೆ ಕಾರ್ಯಕರ್ತರ ಮುಖಾಂತರವಾಗಿ ನನ್ನ ಬಗ್ಗೆ ಮಾಹಿತಿ ನೀಡಿದ್ದಾರೆ. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ ಎಂಬ ನಂಬಿಕೆ ನನಗಿದೆ. ನಾನು ಈಗಾ ಎರಡು ಕೇತ್ರಕ್ಕೂ ಭೇಟಿ ನೀಡುತ್ತೇನೆ. ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ.ವರುಣಾದಲ್ಲಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸುತ್ತೇವೆ ಎಂದು ವಿ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.