Praveen Sood selected as CBI director: ಸಿಬಿಐಗೆ ನೂತನ ಸಾರಥಿಯಾಗಿ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ನೇಮಕ

Karnataka DGP Praveen Sood appointed new CBI director

Praveen Sood: ಕರ್ನಾಟಕದ ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಸಿಬಿಐ ನಿರ್ದೇಶಕರಾಗಿ (CBI Director) ಹಿರಿಯ ಐಪಿಎಸ್ ಅಧಿಕಾರಿ, ಕರ್ನಾಟಕದ (DGP) ಡಿಜಿಪಿ ಪ್ರವೀಣ್ ಸೂದ್ (Praveen Sood) ನೇಮಕಗೊಂಡಿದ್ದಾರೆ.

ಹೌದು, ಕರ್ನಾಟಕದ(Karnataka) ಡಿಜಿಪಿ(DGP)ಯಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಪಿಎಸ್(IAS) ಅಧಿಕಾರಿ ಪ್ರವೀಣ್ ಸೂದ್(Praveen Sood) ಕೇಂದ್ರೀಯ ತನಿಖಾ ದಳ (ಸಿಬಿಐ)ದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಅವರನ್ನು ನಿರ್ದೇಶಕರಾಗಿ ನೇಮಿಸಿ ಕೇಂದ್ರ ಸರ್ಕಾರ(Central Government) ಆದೇಶ ಹೊರಡಿಸಿದೆ.

ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್(Subhod Kumar Jaiswal) ಅವರ ಎರಡು ವರ್ಷಗಳ ಅವಧಿಯು ಮೇ 25ರಂದು ಕೊನೆಗೊಳ್ಳಲಿದೆ. ಹೀಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ(PM Modi), ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್(Supreme court CJI)ಲೋಕಸಭೆಯ ವಿರೋಧ ಪಕ್ಷದ ನಾಯಕ (Parliament Opposition leadr) ಅಧೀರ್ ರಂಜನ್ ಚೌಧರಿ(Ranjan Chowdhury) ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯು ಮೇ 13 ರಂದು ಶ್ರೀ ಸೂದ್ ಅವರ ಹೆಸರನ್ನು ಅಂತಿಮಗೊಳಿಸಿದೆ.

ಸೂದ್​ ಮೂರು ವರ್ಷಗಳ ಹಿಂದೆ ರಾಜ್ಯ ಡಿಜಿಪಿಯಾಗಿ ನೇಮಕಗೊಂಡಿದ್ದರು. ಮೂಲತಃ ಹಿಮಾಚಲ ಪ್ರದೇಶದ(Himachal Pradesh) ಇವರು ಐಐಟಿ ದೆಹಲಿಯ ವಿದ್ಯಾರ್ಥಿ. ಇದೇ ಮಾರ್ಚ್​ನಲ್ಲಿ ಸೂದ್​ ಬಿಜೆಪಿ ಸರ್ಕಾರವನ್ನು ರಕ್ಷಿಸುತ್ತಿದ್ದಾರೆ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದರು.

1989 ಮೈಸೂರು(Mysore) ಎಎಸ್ಪಿಯಾಗಿ ವೃತ್ತಿ ಆರಂಭಿಸಿದ ಇವರು ಬಳ್ಳಾರಿ, ರಾಯಚೂರಲ್ಲಿ ಎಸ್‍ಪಿ ಆಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. 1999 ರಲ್ಲಿ ಮಾರಿಷಸ್ ದೇಶದ ಪೊಲೀಸ್ ಸಲಹೆಗಾರರಾಗಿ ಮೂರು ವರ್ಷ ಸೇವೆ ಸಲ್ಲಿಸಿದ ಪ್ರವೀಣ್ ಸೂದ್ ಅವರಿಗೆ 1996 ರಲ್ಲಿ ಮುಖ್ಯಮಂತ್ರಿಗಳ ಪದಕ, 2002ರಲ್ಲಿ ಪೊಲೀಸ್ ಪದಕ ದೊರೆತಿದೆ.

2004-07 ರಲ್ಲಿ ಮೈಸೂರು ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. 2008ರಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 2011 ರಲ್ಲಿ ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾಗಿದ್ದರು. 2013-14 ಕರ್ನಾಟಕ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಮ್ಯಾನೆಜಿಂಗ್ ಡೈರೆಕ್ಟರ್, 2017 ರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ನಮ್ಮ 100, ಪಿಂಕ್ ಹೊಯ್ಸಳ, ಸುರಕ್ಷಾ ಅಪ್ಲಿಕೇಶನ್ ನಂತಹ ಪ್ರಯೋಗಗಳು ಪ್ರವೀಣ್ ಸೂದ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಾಗ ಜಾರಿಯಾಗಿದ್ದವು‌.

ಅಂದಹಾಗೆ ಪ್ರವೀಣ್ ಸೂದ್ ಅವರು ಕರ್ನಾಟಕ ಕೇಡರ್‌ನ 1986 ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು ಅವರನ್ನು ಮೂರು ವರ್ಷಗಳ ಹಿಂದೆ ರಾಜ್ಯ ಡಿಜಿಪಿಯಾಗಿ ನೇಮಕ ಮಾಡಲಾಗಿತ್ತು.ಅವರು ಮೂಲತಃ ಹಿಮಾಚಲ ಪ್ರದೇಶದವರು ಮತ್ತು ಐಐಟಿ-ದೆಹಲಿಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ.ಈಗ ಅವರು ಸಿಬಿಐ ನಿರ್ದೇಶಕರಾಗಿ ಎರಡು ವರ್ಷಗಳ ನಿಶ್ಚಿತ ಅಧಿಕಾರಾವಧಿಯನ್ನು ಪಡೆಯುತ್ತಾರೆ ಮತ್ತು ಕನಿಷ್ಠ ಮೇ 2025 ರವರೆಗೆ ಅಧಿಕಾರದಲ್ಲಿರುತ್ತಾರೆ.

ಇದನ್ನೂ ಓದಿ:Next Chief minister in Karnataka : ಮೊದಲ ಶಾಸಕಾಂಗ ಸಭೆಗೆ ಅನೇಕ ಶಾಸಕರ ಗೈರು! ಸಿದ್ದುಗೆ 75, ಡಿಕೆಶಿಗೆ 40 ಶಾಸಕರ ಬೆಂಬಲ! ತಲೆಕೆಳಗಾಯ್ತು ಹೈಕಮಾಂಡ್ ಲೆಕ್ಕಾಚಾರ!

Leave A Reply

Your email address will not be published.