Putturu: ಪುತ್ತೂರು: ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ‘ಗೆ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿ ಆಕ್ರೋಶ !
Tribute banner of Sadananda Gowda and Nalin Kumar in puttur
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಪ್ರತೀಕಾರ ತೆಗೆದುಕೊಂಡ ಕೆಲಸ ನಡೆದಿದೆ. ಪುತ್ತೂರು ಬಸ್ ನಿಲ್ದಾಣದ ಬಳಿ ನಳಿನ್ ಕುಮಾರ್ ಹಾಗೂ ಡಿ.ವಿ ಗೆ ಶ್ರದ್ಧಾಂಜಲಿ ಕೋರಲಾಗಿದೆ. ಜತೆಗೆ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಲಾದ ಬಗ್ಗೆ ವರದಿಯಾಗಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರ ಸಂಘ ಪರಿವಾರದ ಗಟ್ಟಿ ನೆಲ. ಇಲ್ಲಿ ಬಿಜೆಪಿ ಸಶಕ್ತವಾಗಿದೆ. ಪುತ್ತೂರಿನಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಾಣಲು ನೀವೇ ಕಾರಣ ಎಂಬ ಒಕ್ಕಣೆಯಿರುವ ಬ್ಯಾನರ್ ಅನ್ನು ಇದೀಗ ಅಳವಡಿಸಲಾಗಿದೆ. ಈ ಮೂಲಕ ಯಾರು ತಮ್ಮ ಆಕ್ರೋಶವನ್ನು ಬಿಜೆಪಿ ಸೋಲಿಗೆ ಕಾರಣಬೂತರಾದ ಡಿ ಬಿ ಸದಾನಂದ ಗೌಡ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಶ್ರದ್ಧಾಂಜಲಿ ಕೋರಿ ತೋರ್ಪಡಿಸಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನಿರಾಕರಿಸಿ ಸುಳ್ಯದಿಂದ ಕರೆತಂದ ಆಶಾ ತಿಮ್ಮಪ್ಪ ಗೌಡ ಅವರಿಗೆ ಟಿಕೆಟ್ ನೀಡಲಾಗಿತ್ತು. ಇನ್ನೊಬ್ಬ ಟಿಕೆಟ್ ಆಕಾಂಕ್ಷಿ ಅರುಣ್ ಕುಮಾರ್ ಪುತ್ತಿಲ್ ಅವರಿಗೆ ಕೂಡಾ ಟಿಕೆಟ್ ನಿರಾಕರಿಸಲಾಗಿತ್ತು. ಒಟ್ಟಾರೆಯಾಗಿ ಪುತ್ತೂರು ಬಿಜೆಪಿಯಲ್ಲಿ ಗೊಂದಲದ ವಾತಾವರಣ ಸೃಷ್ಟಿ ಮಾಡಿದ್ದರು ಬಿಜೆಪಿ ನಾಯಕರುಗಳು. ಈ ನಿರ್ಧಾರದ ಹಿಂದೆ ಮಾಜಿ ಮಂತ್ರಿ ಡಿ ವಿ ಸದಾನಂದ ಗೌಡ ಇದ್ದಾರೆ ಎನ್ನುವ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ.
ಇದರ ಜೊತೆಗೆ ಬಿಜೆಪಿ ಸುಲಭವಾಗಿ ಗೆಲ್ಲುವ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆಯಲ್ಲಿ ಎಡವಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮೇಲೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಆಕ್ರೋಶ ಕಂಡುಬಂದಿತ್ತು. ಇಬ್ಬರೂ ನಾಯಕರ ಸ್ವಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಿದ ಅಪಖ್ಯಾತಿಗೆ ಡಿವಿ ಸದಾನಂದ ಗೌಡ ಮತ್ತು ನಳೀನ್ ಕುಮಾರ್ ಕಟೀಲ್ ಪಾತ್ರರಾಗಿದ್ದರು. ಈಗ ಯಾರೋ ತಮ್ಮ ಆಕ್ರೋಶವನ್ನು ನಳಿನ್ ಕಟೀಲ್ ಮತ್ತು ಡಿ ವಿ ಸದಾನಂದ ಗೌಡ ಅವರ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಕೋರಿ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Praveen Sood selected as CBI director :ಸಿಬಿಐಗೆ ನೂತನ ಸಾರಥಿಯಾಗಿ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ನೇಮಕ