Vivek Agnihotri: ಮೆಟ್ರೋ ರೈಲಿನ ಪ್ರಯಾಣಿಕರ ಮೇಲೆ ಪೊಲೀಸ್ ಕಣ್ಗಾವಲು; ವಿವೇಕ್ ಅಗ್ನಿಹೋತ್ರಿ ಟ್ವೀಟ್ ವೈರಲ್
Vivek Agnihotri tweet about police surveillance of metro train
Vivek Agnihotri: ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ (Delhi Metro) ಪ್ರಯಾಣಿಕರಿಂದ ಆಕ್ಷೇಪಾರ್ಹ ವರ್ತನೆ ಕಂಡು ಬಂದಿತ್ತು. ಈ ಹಿನ್ನಲೆಯಲ್ಲಿ ದೆಹಲಿ ಮೆಟ್ರೋದಲ್ಲಿ ಪೊಲೀಸರು ಗಸ್ತು ತಿರುಗುವ ನಿಯಮವೊಂದು ಬಂದಿದೆ. ಈ ಬಗ್ಗೆ ಬಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ತಮ್ಮ ಅನಿಸಿಕೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಇದೀಗ ಅಗ್ನಿಹೋತ್ರಿ ಅವರ ಟ್ವೀಟ್ ಸಖತ್ ವೈರಲ್ ಆಗಿದೆ.
ʼಇದು ತುಂಬಾ ಮೂರ್ಖತನʼ ಎಂದು ದೆಹಲಿ ಮೆಟ್ರೋ ನಿಗಮದ ಈ ನಿರ್ಧಾರದ ಕುರಿತು ವಿವೇಕ್ ಅಗ್ನಿಹೋತ್ರಿ ತಮ್ಮ ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ. ಪ್ರಯಾಣಿಕರಿಂದ ಯಾವುದೇ ಆಕ್ಷೇಪಾರ್ಹ ನಡವಳಿಕೆ ಇರಬಾರದು ಎಂಬ ಉದ್ದೇಶದಿಂದ ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿ) ಇತ್ತೀಚೆಗೆ ತೆಗೆದುಕೊಂಡ ನಿರ್ಧಾರ ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ. ಅದನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ ಅವರು ಈ ರೀತಿ ಪೋಸ್ಟ್ ಮಾಡಿದ್ದಾರೆ.
ದೆಹಲಿ ಮೆಟ್ರೋದಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬರು ಹಸ್ತಮೈಥುನ ಮಾಡಿಕೊಂಡಂತಹ ಒಂದು ವೀಡಿಯೋ ಸಖತ್ ವೈರಲ್ ಆಗಿತ್ತು. ಅನಂತರ ಸಾರ್ವಜನಿಕರಿಂದ ಸಾರಿಗೆಯ ಶಿಷ್ಟಾಚಾರದ ಬಗ್ಗೆ ಹಲವರು ಪ್ರಶ್ನೆ ಮಾಡಿದ್ದರು. ಅನಂತರ ಪ್ರಯಾಣಿಕರ ಆಕ್ಷೇಪಾರ್ಹ ವರ್ತನೆಗೆ ಸಂಬಂಧಿಸಿದಂತೆ ದೆಹಲಿ ಮೆಟ್ರೋ ಈ ನಿರ್ಧಾರ ತೆಗೆದುಕೊಂಡಿದೆ.
ದೆಹಲಿ ಮೆಟ್ರೋ ಕೋಚ್‌ಗಳಲ್ಲಿ ಸಮವಸ್ತ್ರ ಮತ್ತು ನಾಗರಿಕ ಉಡುಪುಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಹಾಗೂ ಆಕ್ಷೇಪಾರ್ಜ ನಡವಳಿಕೆಯನ್ನು ಗುರುತಿಸಲು ಮೆಟ್ರೋ ಕೋಚ್‌ಗಳಲ್ಲಿ ಹಾಕಿರುವಂತಹ ಸಿಸಿಟಿವಿ ಕ್ಯಾಮೆರಾಗಳನ್ನು ಅಧಿಕಾರಿಗಳು ಪರಿಶೀಲಿಸಲಿದ್ದಾರೆ.