7th Pay Commission: 7ನೇ ವೇತನ ಆಯೋಗದ ಅವಧಿ 6 ತಿಂಗಳು ವಿಸ್ತರಣೆ!!

7th pay commission extension by 6 months

7th-Pay Commission: ರಾಜ್ಯ ಸರ್ಕಾರದಿಂದ ‘7ನೇ ವೇತನ ಆಯೋಗ’ದ ಅವಧಿಯನ್ನು 6 ತಿಂಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿನ 7ನೇ ರಾಜ್ಯ ವೇತನ ಆಯೋಗದ (7th-Pay Commission ) ಅವಧಿಯನ್ನು ಮುಂದಿನ 6 ತಿಂಗಳವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ (ಇಂದು) ಮಂಗಳವಾರ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿ ಉಮಾ ಕೆ. (Uma k) ಆದೇಶ ಹೊರಡಿಸಿದ್ದಾರೆ. ಕರ್ನಾಟಕ 7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲು ಅನುಕೂಲವಾಗುವಂತೆ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು 19/5/2023 ರಿಂದ 6 ತಿಂಗಳವರೆಗೆ ವಿಸ್ತರಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ರಾಜ್ಯ ಸರ್ಕಾರಿ ನೌಕರರ (state government employees) ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು 19- 11-2022ರಂದು 7ನೇ ರಾಜ್ಯವೇತನ ಆಯೋಗವನ್ನು ರಚಿಸಿ, 6 ತಿಂಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಆದೇಶಿಸಲಾಗಿತ್ತು. ವೇತನ ಆಯೋಗ 6 ತಿಂಗಳಿನಲ್ಲಿ ವರದಿ ನೀಡಬೇಕು ಎಂದು ತಿಳಿಸಲಾಗಿತ್ತು. ಆದರೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ (Karnataka election) ಹಿನ್ನೆಲೆ ಆಯೋಗ ವರದಿ ತಯಾರು ಮಾಡುವುದು ತಡವಾಗಿದೆ. ಹಾಗಾಗಿ ಈಗ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕ ಸರ್ಕಾರ 7ನೇ ರಾಜ್ಯ ವೇತನ ಆಯೋಗಕ್ಕೆ ಸುಧಾಕರ್ ರಾವ್ (Sudhakar Rao) ಅಧ್ಯಕ್ಷರಾಗಿದ್ದಾರೆ. ಪಿ. ಬಿ. ರಾಮಮೂರ್ತಿ, ಶ್ರೀಕಾಂತ್ ಬಿ. ವನಹಳ್ಳಿ ಸದಸ್ಯರು. ಮೂಲಸೌಲಭ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಕಾರ್ಯದರ್ಶಿಯಾಗಿದ್ದಾರೆ.

 

ಇದನ್ನು ಓದಿ: Midnight meal: ಮಧ್ಯರಾತ್ರಿ ಹಸಿವಾದ್ರೆ ಏನೇನೋ ತಿನ್ಬೇಡಿ, ಇವುಗಳನ್ನು ಮಾತ್ರ ಸೇವಿಸಿ! 

 

Leave A Reply

Your email address will not be published.