Students: SSLC, PUC ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳೇ ನಿಮಗೊಂದು ಸಿಹಿ ಸುದ್ದಿ ; ಪ್ರತಿಭಾ ಪುರಸ್ಕಾರಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಿ!!

Good news for SSLC and PUC students to apply for Pratibha puraskar Scholarship 2023

Pratibha puraskar Scholarship : ಈಗಾಗಲೇ SSLC, PUC ಪರೀಕ್ಷೆಯು ಮುಕ್ತಾಯಗೊಂಡು, ಫಲಿತಾಂಶವೂ ಬಂದಿದೆ. ಈ ಮಧ್ಯೆ ಇದೀಗ SSLC, PUC ಪರೀಕ್ಷೆಯಲ್ಲಿ ಶೇ. 90ರಷ್ಟು ಅಂಕ ಪಡೆದ ರಾಜ್ಯಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ (Pratibha puraskar Scholarship) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು (Students) ಮೇ 31ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

 

ಈ ಬಗ್ಗೆ ಧಾರವಾಡ ಜಿಲ್ಲಾ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರು ಮಾಹಿತಿ ನೀಡಿದ್ದು, “ ರಾಜ್ಯ ಸರಕಾರಿ ನೌಕರರ (state government employees) ಕೇಂದ್ರ ಸಂಘವು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕೂ ಹೆಚ್ಚು ಅಂಕ ಪಡೆದ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ” ಎಂದು ತಿಳಿಸಿದ್ದಾರೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಯಾರು ಸಲ್ಲಿಸಬಾರದು?
• ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು.
• ವಿದ್ಯಾರ್ಥಿ ಮೊದಲ ಪ್ರಯತ್ನದಲ್ಲೇ ಎಸ್.ಎಸ್.ಎಲ್.ಸಿ ಅಥವಾ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕೂ ಅಧಿಕ ಅಂಕ ಪಡೆದು ತೇರ್ಗಡೆಯಾಗಿರಬೇಕು.
• ನಿಗಮ, ಮಂಡಳಿ, ಪ್ರಾಧಿಕಾರ, ಸ್ಥಳಿಯ ಸಂಸ್ಥೆ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ನೇಮಕಗೊಂಡ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
• ಅರ್ಹ ವಿದ್ಯಾರ್ಥಿಗಳು ಮೇ 31ರ ಒಳಗೆ ಅರ್ಜಿ ಸಲ್ಲಿಸಬೇಕಿದೆ. ವೆಬ್ಸೈಟ್ https://bit.ly/ksgeapp2023 ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :-
ಕೇಂದ್ರ ಕಚೇರಿಯ ವ್ಯವಸ್ಥಾಪಕರಾದ ಸುರೇಶ.ಎನ್. 080-22354784/83
ಲೆಕ್ಕ ಸಹಾಯಕರಾದ ಸೈಯದ್ ಜಬಿ-9902135813,
ಧಾರವಾಡ ಜಿಲ್ಲಾ ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಯಡಳ್ಳಿ -9448668221
ಖಜಾಂಚಿ ರಾಜಶೇಖರ ಬಾಣದ -9448831707

ಇದನ್ನೂ ಓದಿ:Ramanath Rai: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ರಮಾನಾಥ ರೈ!

Leave A Reply

Your email address will not be published.