ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕರಾವಳಿಯ ದಿಗ್ಗಜ ರಾಜಕಾರಣಿ ರಮಾನಾಥ ರೈ!
Ramanath rai declared political retirement
Ramanath Rai: ಮಂಗಳೂರು: ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈ (Ramanath Rai) ಅವರು ಇದೀಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ (mangaluru) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜಕೀಯ ತೊರೆಯುತ್ತೇನೆ. ಆದರೆ, ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದಾರೆ.
ತನ್ನ ವಯಸ್ಸಿನಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದಾರೆ. ಈ ಕಾರಣದಿಂದ ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಾದರೂ ಕಾಂಗ್ರೆಸ್ ಗೆ (congress) ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ. ಈವರೆಗೆ ಹೈಕಮಾಂಡ್ ಹೇಳಿದ ಮಾತುಗಳನ್ನು ಚಾಚೂ ತಪ್ಪದೆ ಕೇಳಿದ್ದೇನೆ, ಮುಂದೆಯೂ ಕೇಳುತ್ತೇನೆ ಎಂದು ಹೇಳಿದರು.
ಈ ಬಾರಿ ಗೆಲ್ಲುವ ವಿಶ್ವಾಸ ಇತ್ತು. ಆದರೆ, ಸೋಲಾಯಿತು. ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಇದರಿಂದ ಕಾರ್ಯಕರ್ತರು ಬೇಸರ ಪಡುವ, ಎದೆಗುಂದಬೇಡಿ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ರಮಾನಾಥ ರೈ ಹೇಳಿದರು.
ರಮಾನಾಥ್ ರೈರವರ ಕ್ಲುಪ್ತ ರಾಜಕೀಯ ಪರಿಚಯ
ರಮಾನಾಥ್ ರೈ 13 ಸೆಪ್ಟೆಂಬರ್ 1952 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಮೂಲದ ಕುಟುಂಬದಲ್ಲಿ ಜನಿಸಿದರು. ಅವರು 50 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿದ್ದಾರೆ. ಸತತ ಆರು ಬಾರಿ ಒಂದೇ ಕ್ಷೇತ್ರದಲ್ಲಿ ಒಂದೇ ಪಕ್ಷದಲ್ಲಿ ಗೆಲುವು ಸಾಧಿಸಿದ್ದಾರೆ. 1985ರಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಧಾನಸಭಾ ಚುನಾವಣೆ ಕಣಕ್ಕಿಳಿದ ರಮಾನಾಥ್ ರೈ ಬಿಜೆಪಿ ತೆಕ್ಕೆಯಲ್ಲಿದ್ದ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಮೊದಲ ಬಾರಿಗೆ ಬಂಟ್ವಾಳದಲ್ಲಿ ತಮ್ಮ ಅಥಿಪತ್ಯ ಸಾಧಿಸಿದ್ದರು. ಈ ಗೆಲುವಿನ ಬಳಿಕ ಹಿಂದಿರುಗಿ ನೋಡದ ಅವರು ಗೆಲುವಿನ ನಾಗಾಲೋಟ ಮುಂದುವರಿಸಿದ್ದರು.
ನಂತರ ಅವರು 1989, 1994, 1999, 2008 ಮತ್ತು 2013ರಲ್ಲಿ ಸತತವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿ ಜನ ಮನ್ನಣೆಗಳಿಸಿದ್ದರು. ಕೇವಲ ಶಾಸಕರಾಗಿ ಅಷ್ಟೇ ಅಲ್ಲದೇ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ ರೈ ಕುಳು !!. 1992 ರಲ್ಲಿ ರಾಜ್ಯ ಗೃಹ ಸಚಿವರಾಗಿ, 1994ರಲ್ಲಿ ಅಬಕಾರಿ ಸಚಿವರಾಗಿ, 1999ರಲ್ಲಿ ಬಂದರು – ಮೀನುಗಾರಿಕೆ ಸಚಿವರಾಗಿ, 2002ರಲ್ಲಿ ಸಾರಿಗೆ ಸಚಿವರಾಗಿ, 2013ರಲ್ಲಿ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸಿದ ಖ್ಯಾತಿ ಮಾಜಿ ಸಚಿವ ಅಮನಾಥ ರೈ ಅವರಿಗೆ ಸಲ್ಲುತ್ತದೆ.
ಸತತ ಎಂಟು ಬಾರಿ ಬಂಟ್ವಾಳ ಕ್ಷೇತ್ರದಿಂದಲೇ ಸ್ಪರ್ಧಿಸಿರುವ ರಮಾನಾಥ ರೈ ಎರಡು ಬಾರಿ ಬಿಜೆಪಿ ಅಭ್ಯರ್ಥಿ ಎದುರು ಸೋಲು ಕಂಡಿದ್ದಾರೆ. 1985ರಿಂದ ನಾಲ್ಕು ಬಾರಿ ಶಾಸಕರಾಗಿದ್ದ ರಮಾನಾಥ ರೈ ಅವರಿಗೆ 2004 ರಲ್ಲಿ ಮೊದಲ ಬಾರಿಗೆ ಸೋಲಾಗಿತ್ತು. ಬಿಜೆಪಿ ಅಭ್ಯರ್ಥಿ ಬಿ.ನಾಗರಾಜ ಶೆಟ್ಟಿ ವಿರುದ್ಧ 5,926 ಮತಗಳ ಅಂತರದಲ್ಲಿ ರಮಾನಾಥ ರೈ ಸೋಲು ಕಂಡಿದ್ದರು. ತಮ್ಮ ಮೊದಲ ಸೋಲಿನ ಬಳಿಕ ಕಂಗೆಡದ ರಮಾನಾಥ ರೈ ಕ್ಷೇತ್ರದಲ್ಲಿ ಮತ್ತೆ ಪಕ್ಷ ಸಂಘಟಿಸಿ 2008 ಹಾಗೂ 2013 ಮತ್ತೆ ಗೆಲುವು ಸಾಧಿಸಿದ್ದರು. ಕಳೆದ ಬಾರಿ 2018ರಲ್ಲಿ ಅವರಿಗೆ ಸೋಲಾಗಿತ್ತು. ಈ ಬಾರಿ ಕೂಡ ಬಂಟ್ವಾಳ ಕ್ಷೇತ್ರದಲ್ಲಿ ಅವರಿಗೆ ಬಿಜೆಪಿಯ ಎದುರು ಸೋಲಾಗಿದೆ.
ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಕೂಡ ಅಷ್ಟೇನೂ ಚೆನ್ನಾಗಿಲ್ಲ. ಬಹುಶಹ ಮುಂದಿನ ತಲೆಮಾರಿಗೆ ಅವಕಾಶ ಕಲ್ಪಿಸಲು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ರಮಾನಾಥ ರೈ ಅವರು ಘೋಷಿಸಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಎಲ್ಲಾ ಗ್ಯಾರಂಟಿಗಳಿಗೆ ಕಂಡೀಷನ್ಸ್ ಅಪ್ಲೈ ಎಂದ ಜಿ ಪರಮೇಶ್ವರ!