Private bus caught fire: ಕಟೀಲು ದೇವಸ್ಥಾನದಲ್ಲಿ ಮುಂಭಾಗದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಬೆಂಕಿಗಾಹುತಿ

private bus caught fire near Kateelu temple

Private bus caught fire: ಮಂಗಳೂರು : ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ (Private bus caught fire) ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

 

ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು ಬಸ್ ನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ನೀರು ಸರಬರಾಜು ಮಾಡುವ ಟ್ಯಾಂಕರ್ ಇದ್ದ ಕಾರಣ ಕೂಡಲೇ ಬೆಂಕಿಯನ್ನು ನಂದಿಸಲಾಗಿದೆ. ಕೂಡಲೇ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

 

ಇದನ್ನು ಓದಿ: Trevor Daniel Jacob: ಹೆಚ್ಚು ವ್ಯೂವ್ಸ್ ಗಾಗಿ ವಿಮಾನವನ್ನೇ ಪತನಗೊಳಿಸಿದ ಈ ಯೂಟ್ಯೂಬರ್; ತಗಲಾಕೊಂಡು 20 ವರ್ಷ ಜೈಲು ಶಿಕ್ಷೆಗೆ ಗುರಿಯಾದ! 

Leave A Reply

Your email address will not be published.