Siddaramaiah: ಬೆಂಗಳೂರಲ್ಲಿ ಸಿದ್ದು ಪ್ರಮಾಣವಚನಕ್ಕೆ ಸಿದ್ದತೆ : ಕಠೀರವ ಕ್ರೀಡಾಂಗಣದಲ್ಲಿ 50 ಸಾವಿರ ಜನರಿಗೆ ವ್ಯವಸ್ಥೆ

Share the Article

Siddaramaiah: ಬೆಂಗಳೂರು : ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್‌ ಗೆಲುವು ಸಾಧಿಸಿದ್ದು,ನಾಳೆ ಬೆಂಗಳೂರಲ್ಲಿ ನೂತನ ಸಿಎಂ ಆಗಿ ಸಿದ್ದರಾಮಯ್ಯ ( Siddaramaiah)ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ನಡೆಸಲಾಗುತ್ತಿದೆ.

ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಮೇ 13ರಂದು ಫಲಿತಾಂಶ ಹೊರ ಬಂದಿದ್ದು, ಕಾಂಗ್ರೆಸ್‌ ಭಾರೀ ಬಹು ಮತದೊಂದಿಗೆ ಗೆಲುವನ್ನು ಸಾಧಿಸಿದ್ದು ಈ ನಿಟ್ಟಿನಲ್ಲಿ ನಾಳೆ ಕರ್ನಾಟಕ ನೂತನ ಸಿಎಂ ಆಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ನಾಳೆ ನಡೆಯುವ ಅದ್ದೂರಿ ಕಾರ್ಯಕ್ರಮಕ್ಕೆ 50 ಸಾವಿರ ಜನರಿಗೆ ವ್ಯವಸ್ಥೆ ಮಾಡಿದ್ದು,
ಗಣ್ಯರು, ಶಾಸಕರು, ಸಾರ್ವಜನಿಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೇ ಹೆಚ್ಚಿನ ಭದ್ರತೆಯನ್ನು ವಹಿಸಿದ್ದು, 70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದ ಬೆನ್ನಲ್ಲೆ ಸಿಎಂ ಹುದ್ದೆಗಾಗಿ ಕೈ ಪಾಳಯದಲ್ಲಿ ಭಾರೀ ಫೈಟ್‌ ನಡೆಸಿದ್ದು, ರಾಹುಲ್‌ ಗಾಂಧಿ ಭೇಟಿಯಾಗಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ಸಿದ್ದರಾಮಯ್ಯ ಮೇಲೆ ಒಲುವ ರಾಹುಲ್‌ ಗಾಂಧಿ ಹೊಂದಿದ್ದರು . ಮುಂದಿನ ಸಿಎಂ ಸಿದ್ದರಾಮಯ್ಯ ಹೆಸರು ಫಿಕ್ಸ್‌ ಆದ ಬೆನ್ನಲ್ಲೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭರದಿಂದಲೇ ಸಿದ್ದತೆ ನಡೆಸಲಾಗುತ್ತಿದೆ ಎಂದು ತಿಳಿಯಲಾಗಿದೆ.

 

 

ಇದನ್ನು ಓದಿ: Private bus caught fire: ಕಟೀಲು ದೇವಸ್ಥಾನದಲ್ಲಿ ಮುಂಭಾಗದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಬೆಂಕಿಗಾಹುತಿ

Leave A Reply

Your email address will not be published.