YSV Datta: ಬಹಿರಂಗ ಪತ್ರ ಬರೆದು ರಾಜಕೀಯ ನಿವೃತ್ತಿ ಘೋಷಿಸಿದ ವೈ.ಎಸ್.ವಿ. ದತ್ತ ; ಕಡೂರಿನಲ್ಲಿ ನಡೆಯಲಿದೆ ಗಣಿತ ಮೇಷ್ಟ್ರ ಪಶ್ಚಾತ್ತಾಪದ ಪಾದಯಾತ್ರೆ!!

YSV Datta Announced retirement from electoral politics

YSV Datta: ವಿಧಾನಸಭಾ ಚುನಾವಣೆಯಲ್ಲಿ(Karnataka Assembly election) ಕಾಂಗ್ರೆಸ್(Congress)ಪಕ್ಷವು ಐತಿಹಾಸಿಕ ಗೆಲುವುನ್ನು ದಾಖಲಿಸಿ, ಸಂಭ್ರಮಿಸಿ ಇದೀಗ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ತಿಕ್ಕಾಟ ನಡೆಸುತ್ತಿದ್ದರೆ, ಇತ್ತ ಕಡೆ ಚುನಾವಣೆಯಲ್ಲಿ ಪರಾಜಿತೊಂಡ ಘಟಾನುಘಟಿ ನಾಯಕರುಗಳು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿ ಎಲ್ಲರಿಗೂ ಅಚ್ಚರಿ ಮೂಡಿಸುತ್ತಿದ್ದಾರೆ. ಅಂತೆಯೇ ಇದೀಗ ಕಡೂರಿನ ಜನಪ್ರಿಯ ನಾಯಕ, ಗಣಿತ ಮೇಷ್ಟ್ರು ವೈಎಸ್ವಿ ದತ್ತ(YSV Datta) ರಾಜಕೀಯ ನಿವೃತ್ತಿ ಪಡೆದಿದ್ದಾರೆ.

ಹೌದು, ಇತ್ತೀಚೆಗಷ್ಟೆ ಹೊನ್ನಳ್ಳಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ(BJP) ನಾಯಕ ರೇಣುಕಾಚಾರ್ಯ(Renukachaya) ಹಾಗೂ ಕಾಂಗ್ರೆಸ್ ದಿಗ್ಗಜ ರಮನಾಥ ರೈ(Ramanath Rai) ಅವರು ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಡೂರು(Kaduru) ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್​ನ ವೈಎಸ್​ವಿ ದತ್ತ (YSV Datta) ಅವರು ಇದೀಗ ಚುನಾವಣಾ ರಾಜಕೀಯದಿಂದ ಹಿಂದೆಸರಿದಿದ್ದಾರೆ.

ಅಲ್ಲದೆ ಕೇವಲ ನಿವೃತ್ತಿ ಪಡೆವುದು ಮಾತ್ರವಲ್ಲದೆ ಚುನಾವಣೆ ಸಮಯದಲ್ಲಿ ನಡೆದ ಬೆಳವಣಿಗೆಯಿಂದ ಪಶ್ಚಾತ್ತಾಪ ಪಟ್ಟಿರುವ ದತ್ತ ಅವರು, ಇದೀಗ ಕ್ಷೇತ್ರದಲ್ಲಿ ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡು ಜನರಲ್ಲಿ ಕ್ಷಮೆ ಕೋರಲು ನಿರ್ಧರಿಸಿದ್ದಾರೆ. ಹೀಗಾಗಿ ಮತದಾರರನ್ನು ಉದ್ದೇಶಿಸಿ ಬಹಿರಂಗ ಪತ್ರ ಒಂದನ್ನು ಬರೆದಿದ್ದಾರೆ.

ಅಂದಹಾಗೆ ಕಡೂರು(Kaduru) ವಿಧಾನಸಭಾ ಕ್ಷೇತ್ರದ ಮತದಾರ ಬಂಧುಗಳಿಗೆ ನಿಮ್ಮ ದತ್ತಣ್ಣ ಮಾಡುವ ನಮಸ್ಕಾರಗಳು ಎಂದು ಹೇಳಿ ಸುದೀರ್ಘವಾದ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ, ಕ್ಷೇತ್ರದ ನೂತನ ಶಾಸಕರಿಗೆ ಮಂತ್ರಿಯಾಗಲೆಂದು ಶುಭ ಹಾರೈಸಿದರು. ಸದ್ಯ ನಾನೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ನಾನು ಎಲ್ಲಿ ಎಡವಿದೆ, ನನ್ನ ಮತದಾರ ಬಂಧುಗಳಾದ ನಿಮ್ಮ ನಿರೀಕ್ಷೆಯನ್ನು ಮುಟ್ಟಲು ನಾನು ಎಲ್ಲಿ ವಿಫಲನಾಗಿದ್ದೇನೆ ಎಂಬ ಬಗ್ಗೆ ಚಿಂತನ ಮಂಥನ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಸದಾ ಕೃತಜ್ಞನಾಗಿರುತ್ತೇನೆ

“2023ರ ರಾಜ್ಯ ವಿಧಾನಸಭೆ ಚುನಾವಣೆ ಅತ್ಯಂತ ಶಾಂತಿಯುತವಾಗಿ ಸಂಪನ್ನವಾಗಿದೆ. ಕಳೆದ 30ದಿನಗಳಿಂದ ನಿಮ್ಮ ಮನೆ ಹಾಗೂ ಗ್ರಾಮಗಳಿಗೆ ಮತಯಾಚಿಸಲು ಬಂದಿದ್ದೇನೆ. ನಾನು ಬಂದ ಸಂದರ್ಭದಲ್ಲಿ ನೀವು ತೋರಿದ ಪ್ರೀತಿ, ವಿಶ್ವಾಸ, ಆತಿಥ್ಯಕ್ಕೆ ಸದಾ ಕೃತಜ್ಞನಾಗಿರುತ್ತೇನೆ.2023ರ ಚುನಾವಣೆ ನನ್ನ ಪಾಲಿಗೆ ಅವಿಸ್ಮರಣೀಯ ಆಗಬಹುದೆಂಬ ಆಶಾಭಾವನೆ ಮೂಡಿತ್ತು. ಅದಲ್ಲದೆ ಇದು ನನ್ನ ಕಡೇ ಚುನಾವಣೆ ಎಂದು ನಿಮ್ಮೆಲ್ಲರಿಗೆ ತಿಳಿಸಿದ್ದೆ. ಆದರೆ, ಚುನಾವಣೆ ಮುಗಿದು ಫಲಿತಾಂಶ ಹೊರಬಂದ ಮೇಲೆ ನನಗೆ ವಾಸ್ತವ ದರ್ಶನವಾಯಿತು.

2006ರಲ್ಲಿ ನಾನು ಕಡೂರು ಕ್ಷೇತ್ರಕ್ಕೆ ಅನಿವಾರ್ಯವಾಗಿ ಬಂದ ದಿನದಿಂದ 2023ರವೆರಗೂ ನನ್ನ ನಡವಳಿಕೆ, ನಿರ್ಧಾರ ಹಾಗು ಮತದಾರನೊಂದಿಗಿನ ಸಂಬಂಧದ ಬಗ್ಗೆ ನಾನೇ ಎಲ್ಲೋ ಎಡವಿದ್ದೇನೆ ಎಂಬ ಅನುಮಾನ ಕಾಡತೊಡಗಿದೆ. ಚುನಾವಣಾ ಫಲಿತಾಂಶದ ಬಗ್ಗೆ ನಾನು ಎಂದು ತಲೆಕೆಡಿಸಿಕೊಂಡವನಲ್ಲ. ನನ್ನ ರಾಜಕೀಯ ಜೀವನದಲ್ಲಿ ಗೆಲುವಿಗಿಂತ ಸೋಲನ್ನೇ ಜಾಸ್ತಿ ನೋಡಿದ್ದೇನೆ. ಎರಡನ್ನು ಸಮಾನಾವಾಗಿ ಸ್ವೀಕರಿಸುವ ಮನೋಭಾವ ನನದು ಹಾಗಾಗಿ ಬಂದ ಫಲಿತಾಂಶದ ಬಗ್ಗೆ ನನಗೆ ಎಳ್ಳಷ್ಟು ಬೇಸರವಿಲ್ಲ.

ನಾನೀಗ ಆತ್ಮವಾಲೋಕನ ಮಾಡಿಕೊಳ್ಳಬೇಕಿದೆ ಚುನಾವಣೆಯಲ್ಲಿ ನಾನು ಎಲ್ಲಿ ಎಡವಿದೆ ಮತದಾರ ಬಂಧುಗಳಾದ ನಿಮ್ಮ ನಿರೀಕ್ಷೆಯನ್ನು ಮುಟ್ಟಲು ಎಲ್ಲಿ ವಿಫಲನಾಗಿದ್ದೇನೆ ಎಂಬುದರ ಕುರಿತು ಚಿಂತನ-ಮಂಥನ ಮಾಡುತ್ತಿದ್ದೇನೆ. ಈ ಸೋಲು ನನ್ನ ಉತ್ಸಾಹವನ್ನು ಕಡಿಮೆ ಮಾಡಿಲ್ಲ ಚುನಾವಣಾ ರಾಜಕೀಯದಿಂದ ಹೊರನಡೆಯಲು ತೀರ್ಮಾನಿಸಿದ್ದೇನೆ. ಆದರೆ, ಸಕ್ರಿಯ ರಾಜಕರಾಣದಿಂದ ದುರ ಸರಿಯುವ ಮಾತಿಲ್ಲ.

ಕಳೆದ 17 ವರ್ಷಗಳಿಂದ ನೀವು ತೋರಿರುವ ಪ್ರೀತಿ, ಅಭಿಮಾನದ ಕಾರಣಕ್ಕಾಗಿ ನಿಮ್ಮ ಋಣ ತೀರಿಸುವ ಹಾಗೂ ನನ್ನ ಕೊನೆಯ ಉಸಿರಿರುವವರೆಗೂ ನಿಮ್ಮೊಂದಿಗೆ ಇದ್ದು ಈ ನೆಲದಲ್ಲಿಯೇ ಮಣ್ಣಾಗಬೇಕು ಎಂಬ ದೃಢ ಸಂಕಲ್ಪ ಮಾಡಿರುತ್ತೇನೆ. ಈ ನಿಟ್ಟಿನಲ್ಲಿ ನಾನೊಂದು ನಿರ್ಧಾರಕ್ಕೆ ಬಂದಿದ್ದು ಜೂನ್​ 24ರಂದು ನನ್ನ 70ನೇ ಜನ್ಮದಿನ. ನನ್ನ ಜನ್ಮದಿನದಂದು ಪಾದಯಾತ್ರೆಯನ್ನು ಆರಂಭಿಸಿ ನಿಮ್ಮ ನಿಮ್ಮ ಊರುಗಳಿಗೆ ಬಂದು ನಾನು ನನ್ನ ತಪ್ಪುಗಳನ್ನು ನಿಮ್ಮ ಬಳಿ ನಿವೇದಿಸಿಕೊಂಡು ನಿಮ್ಮ ಕ್ಷಮೆ ಕೇಳುವ ಸಲುವಾಗಿ ನಾನೇ ಪ್ರಾಯಶ್ಚಿತ ಮಾಡಿಕೊಳ್ಳಬೇಕು ಎಂದು ನಿರ್ಧರಿಸಿದ್ದೇನೆ.

ಪ್ರಾಯಶ್ಚಿತ ಪಾದಯಾತ್ರೆ ಎಂಬ ಹೆಸರಿನಲ್ಲಿ ನಾನು ನಿಮ್ಮಲ್ಲಿಗೆ ಬರುತ್ತಿದ್ದೇನೆ. ಇದು ಯಾವುದೇ ಚುನಾವಣೆಯ ದೃಷ್ಟಿಯಿಂದಲ್ಲ . ಬದಲಿಗೆ ನಾನೇ ಮಾಡಿರಬಹುದಾದ ಅನೇಕ ತಪ್ಪುಗಳಿಗೆ ನೀವು ನೀಡಿರುವ ಶಿಕ್ಷೆಗೆ ಪ್ರಾಯಶ್ಚಿತ ಮಾಡಿಕೊಳ್ಳಲು ಇದು ಸಕಾಲವಾಗಿದ್ದು ಈ ಕ್ರಮಕ್ಕೆ ಮುಂದಾಗಿದ್ದೇನೆ. ಜೂನ್​ ಮೊದಲನೇ ವಾರ ಪಾದಯಾತ್ರೆಯ ಪ್ರವಾಸದ ವಿವರವನ್ನು ನಿಮಗೆ ತಲುಪಿಸುತ್ತೇನೆ” ಎಂದು ವೈಎಸ್​.ವಿ ದತ್ತಾ ತಿಳಿಸಿದ್ದಾರೆ.

ಇದನ್ನೂ ಓದಿ:Rozgar Mela: 71 ಸಾವಿರ ಯುವಕರಿಗೇ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ!

Leave A Reply

Your email address will not be published.