Sudhakar vs MTB Nagraj: Sudhakar vs MTB Nagraj : ಬಿಜೆಪಿ ಪಾಳಯದಲ್ಲಿ ಮಾಜಿ ‘ಕಾಂಗಿ’ಗಳ ಕಚ್ಚಾಟ ; ಸಿದ್ದು ವಿರುದ್ಧದ ಟ್ವೀಟ್ ಬೆನ್ನಲ್ಲೇ ಸುಧಾಕರ್ ವಿರುದ್ಧ ತಿರುಗಿಬಿದ್ದ ಎಂಟಿಬಿ!
MTB Nagraj turned against Sudhakar after his tweet against Siddu
Sudhakar vs MTB Nagraj: ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಮೈತ್ರಿ ಸರ್ಕಾರದ (Coalition Government) ಪತನದಲ್ಲಿ ಸಿದ್ದರಾಮಯ್ಯ (Siddaramaiah) ಪಾತ್ರವಿತ್ತು ಎಂಬಂತೆ ಟ್ವೀಟ್ ಮಾಡಿದ್ದ ಮಾಜಿ ಸಚಿವ ಡಾ ಕೆ ಸುಧಾಕರ್ (Sudhakar vs MTB Nagraj) ಅವರಿಗೆ ಮಾಜಿ ಸಚಿವ ಎಂಟಿಬಿ ನಾಗರಾಜ್ (MTB Nagaraj) ತಿರುಗೇಟು ನೀಡಿದ್ದಾರೆ. ಅಲ್ಲದೆ, ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ, ಬೇಕು ಎಂದರೆ ಅವರ ಮನೆ ದೇವರ ಮೇಲೆ ಆಣೆ ಮಾಡಿ ಸುಧಾಕರ್ ಈ ಮಾತು ಹೇಳಲಿ ಎಂದು ಎಂಟಿಬಿ ಸವಾಲು ಹಾಕಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ (Tweet) ಮಾಡಿ ಎಂಟಿಬಿ ನಾಗರಾಜ್ ಕೌಂಟರ್ ಕೊಟ್ಟಿದ್ದಾರೆ.
ಹೌದು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಮಾಜಿ ಶಿಷ್ಯಂದಿರಲ್ಲಿಯೇ ಇದೀಗ ಒಡಕು ಮೂಡಿದೆ. ಸಿದ್ದರಾಮಯ್ಯ ಪರ ಎಂಟಿಬಿ ನಾಗರಾಜ್ (MTB Nagaraj) ಬ್ಯಾಟಿಂಗ್ ಮಾಡಿದ್ದಾರೆ. ಬಿಜೆಪಿಗೆ ಸಿದ್ದರಾಮಯ್ಯ ಪ್ರೇರಣೆ ಎಂಬ ಡಾ.ಕೆ.ಸುಧಾಕರ್ (K Sudhakar), ಎಸ್ ಟಿ ಸೋಮಶೇಖರ್ (ST Somashekhar) ಟ್ವೀಟ್ ಹಿನ್ನೆಲೆಯಲ್ಲಿ ಇದೀಗ ಎಂಟಿಬಿ ಅವರು ಸುಧಾಕರ್ ಗೆ ಕೌಂಟರ್ ನೀಡಿದ್ದಾರೆ. ಸುಧಾಕರ್ ಟ್ವೀಟ್ ಗೆ ಎಂಟಿಬಿ ವಿರೋಧ ವ್ಯಕ್ತಪಡಿಸಿದ್ದು, ಸುಧಾಕರ್ ಸುಳ್ಳು ಹೇಳ್ತಿದ್ದಾರೆಂದು ಆರೋಪ ಮಾಡಿದ್ದಾರೆ.
ಅಂದಹಾಗೆ ಬೆಳಿಗ್ಗೆ ತಾನೆ ಮಾಜಿ ಸಚಿವ ಡಾ. ಸುಧಾಕರ್ ಅವರು “2019ರ ಲೋಕಸಭೆ ಚುನಾವಣೆವರೆಗೂ(2019th Parliament election) ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ(Kumaraswamy) ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು. ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು(Siddaramaiah) ನಿರಾಕರಿಸಲು ಸಾಧ್ಯವೇ?” ಎಂದು ಟ್ವೀಟ್ ಮಾಡಿದ್ದರು.
ಇದಕ್ಕೆ ಬರೋಬ್ಬರಿ 7 ಗಂಟೆಗಳ ಬಳಿಕ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ವಿಧಾನಪರಿಷತ್ ಸದಸ್ಯ(MLC) ಎಂಟಿಬಿ ನಾಗರಾಜ್(MTB Nagraj) ಅವರು, ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಬಂದಿದ್ದಾರೆ. “ಸಿದ್ದರಾಮಯ್ಯ ಅವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ” ಎಂದಿದ್ದಾರೆ.
ಅಲ್ಲದೆ ಮುಂದುವರೆದು “ಮಾಜಿ ಸಚಿವರಾದ ಸುಧಾಕರ್(Sudhakar) ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ಅವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು?” ಎಂದು ಪ್ರಶ್ನಿಸಿದ್ದಾರೆ. “ನಾವು ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು?ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು?” ಎಂದು ಕಿಡಿಕಾರಿದ್ದಾರೆ.
ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಜಿ ಸಚಿವ ಭೈರತಿ ಬಸವರಾಜ್(Bhayrati Basavaraj), 2018ರ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಹಕಾರವೇ ಸಿಗದಿದ್ದಾಗ ನಮ್ಮ ಸಮಸ್ಯೆಯನ್ನು ಬಗೆಹರಿಸುವ ಸ್ಥಾನದಲ್ಲಿದ್ದ ಮಾನ್ಯ ಸಿದ್ದರಾಮಯ್ಯನವರನ್ನು ವಿನಂತಿಸಿದರೂ, ಸ್ವತಹ ನನಗೇ ಈ ಸಮಸ್ಯೆ ಇದೆ 2019ರ ಚುನಾವಣೆವರೆಗೆ ಮಾತ್ರ ಈ ಸರ್ಕಾರವಿರಲಿದೆ ಎಂದರು. ಹಾಗಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ನಾವು ರಾಜೀನಾಮೆ ನೀಡಬೇಕಾಯಿತು ಎಂದು ಟ್ವೀಟ್ ಮಾಡಿ ಸಿದ್ದರಾಮಯ್ಯ ಪರ ನಿಂತು ಸುಧಾಕರ್‌ಗೆ ಕೌಂಟರ್ ಕೊಟ್ಟಿದ್ದಾರೆ.
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.
2/3
— Dr Sudhakar K (@mla_sudhakar) May 17, 2023
ಇದನ್ನು ಓದಿ: Daily horoscope 18/05/2023: ಇಂದು ಈ ರಾಶಿಯವರಿಗೆ ವ್ಯಾಪಾರ ವ್ಯವಹಾರಗಳಲ್ಲಿ ಸುಗಮ ದಾರಿ!