Home Karnataka State Politics Updates Nalin Kumar Kateel: ನಳಿನ್, ಸಂದಾನಂದ ಗೌಡರ ಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣ: ಕೊನೆಗೂ ಮೌನ...

Nalin Kumar Kateel: ನಳಿನ್, ಸಂದಾನಂದ ಗೌಡರ ಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣ: ಕೊನೆಗೂ ಮೌನ ಮುರಿದ ಕಟೀಲ್; ಏನಂದ್ರು ಗೊತ್ತಾ?

Nalin Kumar Kateel
Image source- Deccan herald

Hindu neighbor gifts plot of land

Hindu neighbour gifts land to Muslim journalist

Nalin Kumar Kateel: ಬಿಜೆಪಿ(BJP) ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar kateel) ಮತ್ತು ಸಂಸದ ಡಿವಿ ಸದಾನಂದ ಗೌಡ(Sadananda Gowda) ಅವರ ಬ್ಯಾನರ್​ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳನ್ನು ಅರೆಶ್ಟ್ ಮಾಡಿ, ಅವರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿ ಕೊನೆಗೂ ನಳಿನ್ ಕುಮಾರ್ ಕಟೀಲ್ ಮೌನ ಮುರಿದಿದ್ದಾರೆ.

ಹೌದು, ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರಿನಲ್ಲಿ(Puttur) ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿವಿ ಸದಾನಂದ ಗೌಡ ಅವರ ಬ್ಯಾನರ್​ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳನ್ನು ಅರೆಶ್ಟ್ ಮಾಡಿ, ಅವರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಪೊಲೀಸರು ನಡೆದುಕೊಂಡಿರುವ ರೀತಿಯನ್ನು ಖಂಡಿಸಿ ಟ್ವೀಟ್ ಮಾಡಿರುವ ಕಟೀಲರು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

‘ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.

ಅಂದಹಾಗೆ ಪುತ್ತೂರು ಅರಣ್ಯ ಇಲಾಖೆ ಕಚೇರಿ(Puttur Forest office) ಆವರಣ ಗೋಡೆ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರ ಭಾವಚಿತ್ರ ಹಾಕಿ ಬಿಜೆಪಿ ಸೋಲಿಗೆ ಕಾರಣರಾದ ನಾಯಕರಿಗೆ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿದ್ದ ಬ್ಯಾನರ್ ಭಾನುವಾರ(Sunday) ರಾತ್ರಿ ಕಂಡುಬಂದಿತ್ತು. ಸರ್ಕಾರಿ ಆಸ್ತಿಪಾಸ್ತಿ ಮತ್ತು ಸಾರ್ವಜನಿಕ ಸ್ಥಳ ವಿರೂಪ ಬಗ್ಗೆ ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ನಗರ ಠಾಣೆಗೆ ದೂರು ನೀಡಿದ್ದರು. ಬ್ಯಾನರ್ ಅಳವಡಿಕೆ ವಿರುದ್ಧ ಮೇ 15ರಂದು ಬಿಜೆಪಿಯೂ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಘಟನೆಯಲ್ಲಿ ತಮ್ಮ ಕೈವಾಡ ಇಲ್ಲ ಎಂದು ಕಾಂಗ್ರೆಸ್(Congress) ಹೇಳಿಕೊಂಡಿತ್ತು. ನಂತರ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡ ಒಂಬತ್ತು ಮಂದಿ ಮೇಲೆ ಪುತ್ತೂರು ಪೊಲೀಸರು ಹಿಗ್ಗಾಮುಗ್ಗ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದು, ದೌರ್ಜನ್ಯಕ್ಕೆ ಒಳಗಾದವರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇನ್ನು ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಬಿಜೆಪಿ ಕಾರ್ಯಕರ್ತರು. ಈ ಪೈಕಿ ಕೆಲವರು ಈ ಬಾರಿ ಪಕ್ಷೇತರ ಅಭ್ಯರ್ಥಿ ಪುತ್ತಿರ ಅವರ ಚುನಾವಣಾ ಪರ ಪ್ರಚಾರ ಮಾಡಿದ್ದರೆ, ಉಳಿದವರು ಬಿಜೆಪಿ ಪರ ಫೀಲ್ಡ್ ವರ್ಕ್ ಮಾಡಿದ್ದರು. ಪೊಲೀಸರು ದೌರ್ಜನ್ಯದ ಹಿಂದೆ ಸ್ಥಳೀಯ ಹಾಗೂ ಜಿಲ್ಲಾಮಟ್ಟದ ಮುಖಂಡರ ಚಿತಾವಣೆಯಿದೆ ಎಂಬ ಆರೋಪ ಕೇಳಿಬರುತ್ತಿದೆ. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೇ ದೌರ್ಜನ್ಯದ ಉಸ್ತುವಾರಿ ವಹಿಸಿದ್ದಾರೆಂಬ ಟೀಕೆಯೂ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಫೋಟೋ ಮತ್ತು ವಿಡಿಯೋ ಬಗ್ಗೆ ನೆಟ್ಟಿಗರು ಭಾರೀ ಆಕ್ರೋಶ ಹೊರಹಾಕಿ, ಪುತ್ತೂರಿನಲ್ಲಿ ಪೊಲೀಸರೇ ಗೂಂಡಾಗಿರಿಗೆ ಇಳಿದರೇ? ಎಂದು ಪ್ರಶ್ನಿಸಿದ್ದಾರೆ.

 

ಇದನ್ನು ಓದಿ: D.K. Shivakumar: ಮುಂದಿನ ಡಿಸಿಎಂ ಡಿ.ಕೆ.ಶಿವಕುಮಾರ್‌ : ನಿವಾಸದ ಮುಂದೆ ಬ್ಯಾನರ್‌ ಫಿಕ್ಸ್‌