Puttur: ಬ್ಯಾನರ್ ವಿವಾದ, ದೌರ್ಜನ್ಯ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ
International Human Rights Commission visits Puttur banner dispute
Puttur: ಪುತ್ತೂರು : ಬ್ಯಾನರ್ ವಿಚಾರದಲ್ಲಿ ಉಂಟಾದ ಬೆಳವಣಿಗೆಯಲ್ಲಿ ಪೊಲೀಸರು ಬಂಧಿಸಿದ ಯುವಕರಿಗೆ ದೌರ್ಜನ್ಯ ನಡೆಸಿದ ಕುರಿತಂತೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ.
ಪೋಲಿಸ್ ದೌರ್ಜನ್ಯ ಒಳಗಾಗಿ ತೀವ್ರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಅವಿನಾಶ್ ಹಾಗೂ ದೀಕ್ಷಿತ್ ರವರನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾರ್ಯ ನಿರ್ವಾಹಕ ನಿರ್ದೇಶಕ, ಅಂತರಾಷ್ಟ್ರೀಯ ಖ್ಯಾತಿಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು, ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾನೂನು ಸಲಹೆಗಾರ ಖ್ಯಾತ ನ್ಯಾಯವಾದಿ ಸುನೀಲ್ ಕುಮಾರ್ ಶೆಟ್ಟಿ ಪುತ್ತೂರಿನ (Puttur)ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಈ ಸಂಧರ್ಭದಲ್ಲಿ ಅವರಿಗೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವತಿಯಿಂದ ಧನಸಹಾಯ ನೀಡಿದ ಅವರು ಕಾನೂನನ್ನು ಮೀರಿ ಅಮಾನುಷವಾಗಿ ದೌರ್ಜನ್ಯ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಿಸುವುದರ ಜೊತೆಗೆ ಗಾಯಗೊಂಡ ಅಮಾಯಕರಿಗೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವತಿಯಿಂದ ಸೂಕ್ತ ರೀತಿಯಲ್ಲಿ ಸಹಾಯವನ್ನು ಮಾಡುವುದಾಗಿ ಭರವಸೆಯಿತ್ತರು
ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ರಾಘವ ದೇವಾಡಿಗ ಮುಂತಾದ ಗಣ್ಯರು ಉಪಸ್ಥಿತರಿದ್ದರು.