ಪುತ್ತೂರು ಬ್ಯಾನರ್ ವಿವಾದ: ನನ್ನ ಕ್ಷೇತ್ರಕ್ಕೆ ಬಂದರೆ ಹುಷಾರ್ ಹರೀಶ್ ಪೂಂಜಾಗೆ ಅಶೋಕ್ ಕುಮಾರ್ ರೈ ಎಚ್ಚರಿಕೆ !

Puttur Banner Controversy Ashok Kumar Rai warning to Harish Poonja

Ashok Rai-Harish Poonja: ಬಿಜೆಪಿ ನಾಯಕ ನಳಿನ್ ಕಟೀಲ್ ಮತ್ತು ಸದಾನಂದ ಗೌಡರ ಫೋಟೋ ಹೊಂದಿದ್ದ ಬ್ಯಾನರ್’ಗೆ ಚಪ್ಪಲಿ ಹಾರ, ಶ್ರದ್ದಾಂಜಲಿ ಕೋರಿದ್ದ ಬ್ಯಾನರ್ ವಿವಾದದ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Ashok Rai-Harish Poonja) ಎಚ್ಚರಿಕೆ ನೀಡಿದ್ದಾರೆ. ‘ ನನ್ನ ಕ್ಷೇತ್ರಕ್ಕೆ ಬಂದರೆ ಹುಷಾರ್ ‘ ಎನ್ನುವ ಸಾರಾಂಶದಲ್ಲಿ, ಇಲ್ಲಿ ನಡೆದಿರುವ ವಿವಾದದ ಬಗ್ಗೆ ನಾನೇ ನೋಡಿಕೊಳ್ಳುತ್ತೇನೆ ಎಂದಿದ್ದಾರೆ ಹಾಲಿ ನೂತನ ಶಾಸಕ ಅಶೋಕ್ ಕುಮಾರ್ ರೈ.

 

” ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ ಎಂದು ಈಗಾಗಲೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ” ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ತಿಳಿಸಿದ್ದಾರೆ.

ಮತ್ತೊಂದೆಡೆ, ” ಇದು ಕಂಬಳದ ಕೋಣಕ್ಕೆ ಹೊಡೆದರೂ ಶಿಕ್ಷೆಯಾಗುವ ಕಾಲ. ಹಾಗಿರುವಾಗ ಕಾನೂನು ಕಾಪಾಡುವವರೇ ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ಅಮಾನುಷ ದೌರ್ಜನ್ಯ ಎಸಗಿದ್ದು ಹೇಗೆ ? ಬ್ಯಾನರ್ ಹಾಕಿದ ಆರೋಪಿಗಳಿಗೆ ಹಲ್ಲೆ ನಡೆಸಿದ್ದು ಕಾಂಗ್ರೆಸ್ಸಿನವರೇ ” ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಆರೋಪಿಸಿದ್ದಾರೆ.

ಕಲ್ಲಡ್ಕ ಭಟ್ರವರ ಆರೋಪಕ್ಕೆ ಖಾರವಾಗಿಯೇ ಶಾಸಕ ಅಶೋಕ್ ರೈ ಉತ್ತರಿಸಿದ್ದಾರೆ. ” ನನ್ನ ಕ್ಷೇತ್ರದಲ್ಲಿ ಅನ್ಯಾಯವಾದವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪ್ರಕರಣದ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಿ ಅಮಾನತು ಮಾಡುವಂತೆ ಸೂಚಿಸಿದ್ದೆ. ಅದರಂತೆ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಕ್ರಮ ಜರುಗಿಸಲಾಗಿದೆ ” ಎಂದಿದ್ದಾರೆ.

” ಅಧಿಕಾರಿಗಳ ಮೇಲೆ ಒತ್ತಡ ಹಾಕಿದವರ ಕಾಲ್ ಲಿಸ್ಟ್ ತೆಗೆದು ಅದನ್ನು ಎರಡು ದಿನದೊಳಗೆ ಬಹಿರಂಗಪಡಿಸುವೆ, ಆವಾಗ ಪುತ್ತೂರಿನ ಜನತೆಗೆ ಎಲ್ಲವೂ ಗೊತ್ತಾಗಲಿದೆ. ಬೆಳ್ತಂಗಡಿ ಶಾಸಕ ಹರೀಶ್‌ಪೂಂಜರವರು ಪುತ್ತೂರಿಗೆ ಬಂದು ಈ ವಿಚಾರದಲ್ಲಿ ಮಾತಾಡುವ, ಮೂಗು ತೂರಿಸುವ ಅಗತ್ಯವಿಲ್ಲ. ನನ್ನ ಕ್ಷೇತ್ರದಲ್ಲಿ ಆಗಿರುವ ಘಟನೆಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ ” ಎಂದು ಅವರು ಹೇಳಿದ್ದಾರೆ. ‘ ಹೊಸ ಕನ್ನಡ ‘ ಪತ್ರಿಕೆಯು ದಿಟ್ಟ ವರದಿ ಮಾಡಿದ ನಂತರ, ಈ ಅಮಾನುಷ ಕೃತ್ಯವು ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ಇದೀಗ ಒಟ್ಟಾರೆ ಇಡೀ ಘಟನೆ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: Kalladka Prabhakar Bhatt: ‘ ಕಂಬಳದ ಕೋಣಕ್ಕೆ ಹೊಡೆದರೆ ಶಿಕ್ಷೆ ಯಾಗುವ ಕಾಲದಲ್ಲಿ ಪುತ್ತೂರಿನಲ್ಲಿ ಅಮಾನುಷ ಹಲ್ಲೆ ಖಂಡನೀಯ ‘ – ಕಲ್ಲಡ್ಕ ಪ್ರಭಾಕರ ಭಟ್

Leave A Reply

Your email address will not be published.