Rahul Gandhi: 5 ಗ್ಯಾರಂಟಿ ಯೋಜನೆ ಜಾರಿ ಮಾಡುವ ಸ್ಪಷ್ಟನೆ : ರಾಹುಲ್ ಗಾಂಧಿ

Clarification on Implementation of 5 Guarantee Scheme Rahul Gandhi

Rahul Gandhi: 2ನೇ ಬಾರಿ ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನೇಮಕ ಆಗಿದ್ದು, ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ನೇಮಕವಾಗಿದ್ದಾರೆ. ಜೊತೆಗೆ 8 ಮಂದಿ ಶಾಸಕರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ಮಾತನಾಡಿದ ರಾಹುಲ್ ಗಾಂಧಿ (Rahul Gandhi) , ರಾಜ್ಯದ ಜನತೆಗೆ ನನ್ನ ಕಡೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಧನ್ಯವಾದಗಳನ್ನು ತಿಳಿಸುತ್ತೇನೆ. ನಿಮ್ಮೆಲ್ಲರಿಂದ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣವಾಗಿ ಬಹುಮತ ಬಂದಿದೆ. ನಾವು ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನಡೆಸುತ್ತೇವೆ. ನಾವು ಕೊಟ್ಟ ಗ್ಯಾರಂಟಿ ಘೋಷಣೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

ಮೊದಲನೆಯದಾಗಿ ಗೃಹಲಕ್ಷ್ಮಿ ಯೋಜನೆ – ಪ್ರತಿ ತಿಂಗಳು ಮಹಿಳೆಯರಿಗೆ 2 ಸಾವಿರ ರೂ.
ಎರಡನೆಯದು ಗೃಹಜ್ಯೋತಿ- 200 ಯುನಿಟ್ ವಿದ್ಯುತ್ ಉಚಿತ.
ಮೂರನೇಯದು ಅನ್ನಭಾಗ್ಯ-10 ಕೆಜಿ ಅಕ್ಕಿ ಉಚಿತ.
ನಾಲ್ಕನೇಯದು ಶಕ್ತಿ-ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ.
ಕೊನೆಯದಾಗಿ ಯುವನಿಧಿ -ಪದವಿಧರರಿಗೆ 3,000 ರೂ. ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ ನೀಡುತ್ತೇವೆ.

ಈ ಮೇಲಿನಂತೆ ನಾವು ಕೊಟ್ಟ ಮಾತನ್ನು ನಾವು ನಡೆಸುತ್ತೇವೆ. ಸದ್ಯ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಂಪುಟದಲ್ಲೇ 5 ಗ್ಯಾರಂಟಿ ಯೋಜನೆ ಜಾರಿಗೆ ಬರಲಿವೆ ಎಂದು ಹೇಳಿದ್ದಾರೆ.

ಸದ್ಯ ಇಂದು ಮಧ್ಯಾಹ್ನ 12.30ಕ್ಕೆ ರಾಜ್ಯಪಾಲ ತಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 8 ಮಂದಿ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದ್ದಾರೆ.

ಇದನ್ನೂ ಓದಿ:ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

Leave A Reply

Your email address will not be published.