Free Bus: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಮೋದನೆ ; ಕಂಡೀಷನ್ಸ್ ಏನು ಗೊತ್ತಿದೆಯೇ?
Implement free bus travel scheme for women in karnataka with conditions
Free Bus: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly election) ಮುಕ್ತಾಯವಾಗಿ, ಕಾಂಗ್ರೆಸ್ (Congress) ಪಕ್ಷ ಭರ್ಜರಿ ಜಯ ಗಳಿಸಿದ್ದು, ನಿನ್ನೆ ಮೇ.20ರಂದು (ಇಂದು) ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಡುವೆ ಕಾಂಗ್ರೆಸ್’ನ 5 ಗ್ಯಾರಂಟಿಗಳು (5 Guaranty) ಭಾರೀ ಸದ್ಧು ಮಾಡುತ್ತಿದೆ.
ಕಾಂಗ್ರೆಸ್ 5 ಗ್ಯಾರಂಟಿಗಳನ್ನು ನೀಡಿದ್ದು, ಅವುಗಳು -ಪ್ರತಿ ವ್ಯಕ್ತಿಗೆ 10 ಕಿಲೋ ಅಕ್ಕಿ ಉಚಿತ, ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮನೆಯ ಮಹಿಳೆಗೆ ಪ್ರತಿ ತಿಂಗಳು 2000 ರೂಪಾಯಿ ಮತ್ತು ನಿರುದ್ಯೋಗಿ ಯುವ ಡಿಪ್ಲೋಮಾ ಮತ್ತು ಪದವೀಧರರಿಗೆ ಧನಸಹಾಯ – ಇವುಗಳನ್ನು ಮುಂದಿನ ದಿನಗಳಲ್ಲಿ ಗ್ಯಾರಂಟಿಯ ಭರವಸೆ ನೀಡಿದೆ. ಇದೀಗ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ( Free Bus) ಎಂದು ಹೇಳಲಾಗುತ್ತಿದೆ. ಆದ್ರೆ ಕಂಡೀಷನ್ಸ್ ಅಪ್ಲೈ!
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ (Siddaramaiah) “ ಜನರು ನನಗೆ ಬಹುಮತ ನೀಡಿ, ಗೆಲ್ಲಿಸಿದ್ದಾರೆ. ಐದು ಗ್ಯಾರಂಟಿಯ ಬಗ್ಗೆ ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಇದಕ್ಕೆ ಅನುಮೋದನೆ ನೀಡುವ ವಚನ ನೀಡಿದ್ದೇನೆ. ಇಂದು ಕೊಟ್ಟ ಮಾತಿನಂತೆ ಪ್ರಥಮ ಸಂಪುಟ ಸಭೆಯಲ್ಲೇ ನಮ್ಮ ಎಲ್ಲಾ ಗ್ಯಾರೆಂಟಿಗಳಿಗೆ ತಾತ್ವಿಕ ಅನುಮೋದನೆ ನೀಡಿ ಮತ್ತೊಮ್ಮೆ ನುಡಿದಂತೆ ನಡೆದಿದ್ದೇವೆ” ಎಂದು ಹೇಳಿದರು.
ಸರ್ಕಾರದ ಆದೇಶ ಪತ್ರವನ್ನು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ಮೇ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯಗಳನ್ನು ನೀಡುವ ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ.
ಶಕ್ತಿ ಯೋಜನೆ ಅಡಿಯಲ್ಲಿ, ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.
ಹಾಗೆಯೇ ಶಕ್ತಿ ಯೋಜನೆಯ ಬಗ್ಗೆ ವಿವರವಾದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ತಿಳಿಸಲಾಗಿದೆ. ಇನ್ನು ಐದು ಗ್ಯಾರಂಟಿಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಆದರೆ, ಈ ಮಧ್ಯೆ ಹಲವೆಡೆ ಬಿಪಿಎಲ್ ಕಾರ್ಡ್ ಮಾಡಿಸಲು ಜನರು ಧಾವಿಸುತ್ತಿದ್ದಾರೆ. ಕೆಲವರು ಗ್ಯಾರಂಟಿ ಭರವಸೆಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್ ಉಚಿತ (200 Unit Current Free) ವಿದ್ಯುತ್ ಯೋಜನೆ ನಂಬಿ ಜನರು ವಿದ್ಯುತ್ ಒಲೆಗಳ ಮೊರೆ ಹೋಗುತ್ತಿದ್ದಾರೆ.
ಇದನ್ನೂ ಓದಿ:Sleeper bus: ಸ್ಲೀಪರ್ ಕೋಚ್ ಗಳಲ್ಲಿ ಪ್ರಯಾಣ ಮಾಡುವಿರಾ? ಪರದೆಯ ಹಿಂದಿದೆಯೇ ವೇಶ್ಯಾವಾಟಿಕೆ ಜಾಲ?!
ventolin canadian pharmacy: Buy Albuterol inhaler online – cost ventolin australia
ventolin salbutamol
mail order pharmacy india: Indian pharmacy online – indian pharmacy paypal