C. M. Siddaramaiah: ಕಾನೂನ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು : ಹಿರಿಯ ಪೊಲೀಸರಿಗೆ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
CM Siddaramaiah warns the police to stop illegal activities

CM Siddaramaiah: ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿಕೆಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಇಂದು ಮೊದಲ ಹಿರಿಯ ಪೊಲೀಸರು ಅಧಿಕಾರಿಗಳ ಸಭೆ ನಡೆಸಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಜಿ ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಚಿವರಾದ ಮುನಿಯಪ್ಪ, ಜಮೀರ್ ಅಹಮದ್ ಖಾನ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಸಿಎಂ (CM Siddaramaiah) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.
ಸಭೆಯನ್ನು ಉದ್ದೇಶಿಸಿದ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕರ್ನಾಟಕದಲ್ಲಿ ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು,ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್ಪಿ ಅವರನ್ನೇ ಹೊಣೆಗಾರರು. ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ ತಪ್ಪು ಮತ್ತೆ ಮರುಕಳಿಸಬಾರದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಅಪ್ಪಿತಪ್ಪಿಯೂ ಕಾನೂನು ಸುವ್ಯವಸ್ಥೆ ಹದಗೆಡಬಾರದು. ಅಕ್ರಮ ನೈಟ್ ಕ್ಲಬ್ಗಳ ಮೇಲೂ ಪೊಲೀಸರು ನಿಗಾ ಇಡಬೇಕು. ಡ್ರಗ್ಸ್, ಅಕ್ರಮ ಚಟುವಟಿಕೆ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ಇಡಬೇಕು. ಬಿಜೆಪಿ ವಿರುದ್ಧ ಅದೇಷ್ಟೋ ಪ್ರಕರಣ ದಾಖಲಿಸಿದ ಬಗ್ಗೆ ಸಭೆಯಲ್ಲಿ ಪೊಲೀಸರಿಗೆ ಕ್ಲಾಸ್ ತೆಗೆದುಕೊಳ್ಳಲಾಗಿದೆ.