Aravind Kejriwal: ಎಎಪಿ ಪ್ರಣಾಳಿಕೆ ಬಳಸಿ ಕರ್ನಾಟಕದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್: ಅರವಿಂದ್ ಕೇಜ್ರಿವಾಲ್ ವ್ಯಂಗ್ಯ!
Congress won Karnataka election taking cue from AAP Manifesto Arvind Kejriwal
Aravind Kejriwal: ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಎಎಪಿ ಕಾರಣ, ಯಾಕೆಂದರೆ ಎಎಪಿ ಪ್ರಣಾಳಿಕೆ (AAp Manifesto) ಬಳಸಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ವಾಗ್ದಾಳಿ ನಡೆಸಿದ್ದಾರೆ.
ಹೌದು, ಕರ್ನಾಟಕದಲ್ಲಿ(Karnataka) ಕಾಂಗ್ರೆಸ್ ಸರ್ಕಾರ(Congress Government) ರಚನೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಪ್ರಣಾಳಿಕೆಯಲ್ಲಿನ ಅಂಶಗಳ ಮೂಲಕ ಅಧಿಕಾರ ಹಿಡಿದಿದೆ ಎಂದು ಟೀಕಿಸಿದ್ದಾರೆ. ಬೇರೆ ಪಕ್ಷಗಳು ಶಿಕ್ಷಣ(Education) ಹಾಗೂ ಆರೋಗ್ಯ(Health) ದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿರುವುದರಿಂದ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಎಎಪಿ ಬದಲಾವಣೆ ತಂದಿದೆ ಎಂದು ಹೇಳಿದ್ಧಾರೆ.
ಉತ್ತರ ಪ್ರದೇಶದ(Uttar pradesh) ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಥಾನ ಗಳಿಸಿದ ಎಎಪಿ(AA ನಾಯಕರನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಇತರ ಪಕ್ಷಗಳು ಕೂಡ ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳ ಬಗ್ಗೆ ಮತ ಕೇಳುತ್ತಿರುವುದರಿಂದ ದೇಶದ ರಾಜಕೀಯ ಚರ್ಚೆಯಲ್ಲಿ ಸ್ವಲ್ಪ ಬದಲಾವಣೆ ತರುವ ಪ್ರಯತ್ನದಲ್ಲಿ ಎಎಪಿ ಯಶಸ್ವಿಯಾಗಿದೆ. ನಾವು ಉಚಿತ ವಿದ್ಯುತ್, ಪಡಿತರ, ಮಹಿಳೆಯರಿಗೆ ಹಾಗೂ ಯುವಕರಿಗೆ ಮಾಸಿಕ ಭತ್ಯೆ ನೀಡುತ್ತೇವೆ ಎಂದು ಹೇಳಿದ್ದೆವು. ಕಾಂಗ್ರೆಸ್ ಪಕ್ಷದವರು ಇದನ್ನೇ ಹೇಳಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ ಎಂದು ಅವರು ಹೇಳಿದರು.
ಬಳಿಕ ಮಾತನಾಡಿದ ಅವರು ರಾಜ್ಯ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಸಮೀಕ್ಷೆಯ ಫಲಿತಾಂಶಗಳ ಪ್ರಕಾರ ಎಎಪಿಯ ವಿಜಯಶಾಲಿ ಅಭ್ಯರ್ಥಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಎಎಪಿಯ ಉತ್ತರ ಪ್ರದೇಶ ಘಟಕದ ನಾಯಕರನ್ನು ಅಭಿನಂದಿಸಿದ ಕೇಜ್ರಿವಾಲ್, ರಾಜ್ಯವನ್ನು ಬಿಜೆಪಿ ಭದ್ರಕೋಟೆ ಎಂದು ಪರಿಗಣಿಸಿರುವುದರಿಂದ ಇದು ಕಷ್ಟದ ಚುನಾವಣೆಯಾಗಿದೆ ಎಂದು ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಎಪಿ ನಾಯಕರು ಹಲವಾರು ಸ್ಥಾನಗಳಲ್ಲಿ ಗೆಲುವು ಸಾಧಿಸಿರುವುದು ಉತ್ತರ ಪ್ರದೇಶದ ಜನರು ಬದಲಾವಣೆಗೆ ಸಿದ್ಧರಾಗಿದ್ದಾರೆ ಎಂಬುದರ ಸೂಚನೆಯಾಗಿದೆ. ಅವರಿಗೆ ರಾಜ್ಯದಲ್ಲಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಬೇಕು. ಎಎಪಿ ಈಗ ಉತ್ತರ ಪ್ರದೇಶದಲ್ಲಿ ತನ್ನ ನೆಲೆಯನ್ನು ವಿಸ್ತರಿಸುವತ್ತ ಗಮನಹರಿಸಲಿದೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಲದೊಂದಿಗೆ ಸ್ಪರ್ಧಿಸಲಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ:Keerthi suresh: ಕೊನೆಗೂ ಬಾಯ್ ಫ್ರೆಂಡ್ ಬಗ್ಗೆ ಮೌನ ಮುರಿದ ಕೀರ್ತಿ ಸುರೇಶ್! ಏನಂದ್ರು ಗೊತ್ತಾ ಸೌತ್ ಬ್ಯೂಟಿ!