CT Ravi: ‘ ಜನರೇ ಇಲ್ಲಿ ಕೇಳಿ, ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂ ಸಿದ್ದರಾಮಯ್ಯಗೆ ಕಳ್ಸಿ ‘– ಸಿ.ಟಿ ರವಿ ರಾಜ್ಯದ ಜನರಿಗೆ ಕರೆ !

CT Ravi said people that no one should pay the electricity bill

CT Ravi: ಇನ್ಮುಂದೆ ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಒಂದುವೇಳೆ ಬಿಲ್ ಬಂದ್ರೆ ಮುಖ್ಯಮಂತ್ರಿಗಳಿಗೆ ಕಳುಹಿಸಿ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಯವರು ಜನತೆಗೆ ಕರೆ ನೀಡಿದ್ದಾರೆ.

ಸಿಟಿ ರವಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ ಕಾಂಗ್ರೆಸ್‌ನವರು ಒಂದೇ ದಿನಕ್ಕೆ ಬಣ್ಣ ಬದಲಾಯಿಸಿದ್ದಾರೆ. ಇನ್ನು ದಿನ ಕಳೆದಂತೆ ಇನ್ಯಾವ ಬಣ್ಣ ಬದಲಾಯಿಸ್ತಾರೋ ನೋಡಬೇಕು. ಮೊದಲು ಎಲ್ಲ ಪದವೀಧರ ನಿರುದ್ಯೋಗಿಗಳಿಗೂ 3 ಸಾವಿರ ರೂ. ಕೊಡ್ತೀವಿ ಅಂದಿದ್ರು. ಈಗ 2022-23 ರ ಸಾಲಿನ ಪದವೀಧರರಿಗೆ ಮಾತ್ರ ಅಂತಿದ್ದಾರೆ ‘ ಎಂದು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

” ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಬಸ್‌ಪಾಸ್ ಕೊಡಲೇಬೇಕು. ಗೃಹಿಣಿಯರಿಗೆ 2 ಸಾವಿರ ರೂಪಾಯಿ ಕೊಡಲೇಬೇಕು. ಉಚಿತ ವಿದ್ಯುತ್ ಕೊಡಲೇಬೇಕು. ಹೇಳಿದ್ಮೇಲೆ ಎಲ್ಲ ಗ್ಯಾರಂಟಿನೂ ಕೊಡಲೇಬೇಕು” ಎಂದು ರವಿ ಒತ್ತಾಯಿಸಿದ್ದಾರೆ. ” ಯಾರೂ ವಿದ್ಯುತ್ ಬಿಲ್ ಕಟ್ಟಬಾರದು, ಬಿಲ್ ಬಂದ್ರೆ ಮುಖ್ಯಮಂತ್ರಿಯವರು ಹೇಳಿದ್ದಾರೆ ಅಂತಾ ಅವರಿಗೆ ಕಳುಹಿಸಬೇಕು ” ಎಂದು ಅವರು ಎಚ್ಚರಿಸಿದ್ದಾರೆ.

ಇನ್ನು, ಬಿಜೆಪಿ ಸರ್ಕಾರದ ಅವಧಿಯ ಹಗರಣಗಳನ್ನು ತನಿಖೆಗೆ ಒಪ್ಪಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿಯವರು, ‘ ಅವರು ಸಮಯದ ಗಡುವಿನೊಳಗೆ ತನಿಖೆ ಮಾಡಲಿ. ಅಂತಹ ಹಗರಣ ನಡೆದಿದ್ದರೆ ಮೂರು ತಿಂಗಳಲ್ಲಿ ತನಿಖೆ ಮಾಡಿಸಲಿ. ಆಗ ಸತ್ಯ ಗೊತ್ತಾಗುತ್ತೆ. ಬಿಜೆಪಿ ಅವಧಿಯ ತನಿಖೆಗಳಷ್ಟೇ ಅಲ್ಲ, ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ತನಿಖೆ ನಡೆಸಲಿ ‘ ಎಂದು ಅವರು ಆಗ್ರಹಿಸಿದ್ದಾರೆ.

 

ಇದನ್ನು ಓದಿ: Property Guidance Value: ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ಮೌಲ್ಯ ಹೆಚ್ಚಳ !! 

Leave A Reply

Your email address will not be published.