Fishing Ban: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧ!
Fishing ban in Dakshina Kannada district from June 1
Fishing Ban: ಕರಾವಳಿಯಲ್ಲಿ ಆಳಸಮುದ್ರ ಮೀನುಗಾರಿಕೆ ಸಂಪೂರ್ಣ ನಿಷೇಧಿಸಲಾಗಿದೆ(Fishing Ban), 10 ಅಶ್ವಶಕ್ತಿ ಕ್ಕಿಂತ ಹೆಚ್ಚು ಸಾಮರ್ಥ್ಯ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ದೋಣಿಗಳ ಮೀನುಗಾರಿಕಾ ಚಟುವಟಿಕೆ ಕೈಗೊಳ್ಳುವಂತಿಲ್ಲ. ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಯಂತ್ರೀಕೃತ ದೋಣಿಗಳ ಮೂಲಕ ನಡೆಸುವ ಮೀನುಗಾರಿಕಾ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನ ಮೀನುಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಒಂದು ವೇಳೆ ಸೂಚನೆ ಉಲ್ಲಂಘಿಸಿ ಮೀನುಗಾರಿಕೆ ಮಾಡಿದರೆ ಅಂತವರ ವಿರುದ್ಧ ಮೀನುಗಾರಿಕೆ ಕಾಯ್ದೆ -1986 ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಮತ್ತು ಇತರ ಸವಲತ್ತು ಪಡೆಯಲು ಅನರ್ಹರಾಗುತ್ತಾರೆ.
ಈ ಮೇಲಿನಂತೆ ಕರಾವಳಿಯ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.