Priyank kharge: ಹಿಜಾಬ್, ಗೋಹತ್ಯೆ ನಿಷೇಧ ಸೇರಿ ಬಿಜೆಪಿಯ ಹಲವು ಕಾಯ್ದೆಗಳನ್ನು ವಾಪಸ್ ಪಡೆಯುತ್ತೇವೆ: ಪ್ರಿಯಾಂಕ್ ಖರ್ಗೆ

Will ban bajarang dal RSS if peace is disturbed Karnataka minister Priyank Kharge

Priyank kharge: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ(Bajarangdal) ಮತ್ತು ಆರ್‌ಎಸ್‌ಎಸ್‌(RSS) ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ(BJP) ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ(Pakisthan) ಹೋಗಬಹುದು ಎಂದು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆ (Priyank kharge) ಅಲ್ಪ ಅವಧಿಯಲ್ಲೇ ಹಿಜಾಬ್(Hijab), ಗೋಹತ್ಯೆ ನಿಷೇಧ ಸೇರಿ ವಿವಾದಾತ್ಮಕ ಕಾಯ್ದೆಗಳನ್ನು ಪರಿಶೀಲಿಸಿ ವಾಪಸ್ ಪಡೆಯುತ್ತೇವೆ ಎಂದು ಮತ್ತೊಂದು ಹೇಳಿಕೆಯನ್ನು ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.

ಹೌದು, ಬುಧವಾರ ವಿಧಾನಸೌಧದಲ್ಲಿ(Vidhansowdha) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾವು ಕರ್ನಾಟಕವನ್ನು(Karnataka) ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆಂದು ಭರವಸೆ ನೀಡಿದ್ದೇವೆ. ಹೀಗಾಗಿ ರಾಜ್ಯದಲ್ಲಿ ಯಾರೇ ಕೋಮು ಪ್ರಚೋದನೆ ಮಾಡಿದರೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ ಆ ನಿಟ್ಟಿನಲ್ಲಿ ಬಿಜೆಪಿ ಸರಕಾರದ(BJP Government) ಅವಧಿಯಲ್ಲಿ ಜಾರಿಗೆ ತಂದಿರುವ ಸಂವಿಧಾನ ವಿರೋಧಿ, ಜನವಿರೋಧಿ ಕಾಯ್ದೆಗಳಾದ ಹಿಜಾಬ್ ನಿಷೇಧ ಮತ್ತು ಗೋಹತ್ಯೆ ನಿಷೇಧ ಸೇರಿದಂತೆ ರಾಜ್ಯದ ಪ್ರಗತಿಗೆ ಅಡ್ಡಿಯಾಗಿರುವ ಇತರೆ ಕಾನೂನುಗಳನ್ನು ಹಿಂಪಡೆಯಲಿದ್ದೇವೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯ ಇಲ್ಲದಂತೆ ಆಗಿದೆ. ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ. ಇದಕ್ಕೆ ನಮ್ಮ ಸರಕಾರ ಕಡಿವಾಣ ಹಾಕಲಿದೆ’ ಎಂದು ಅವರು ತಿಳಿಸಿದರು.

ಅಷ್ಟೇ ಅಲ್ಲದೆ ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್(RSS) ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ : Priyanka chopra: ‘ನಾನು ಪ್ರಿಯಾಂಕಾ ಚೋಪ್ರಾಳ ಇನ್ನರ್ವೇರ್ ನೋಡಬೇಕು’ ಎಂದು ಹಟಕ್ಕೆ ಬಿದ್ದಿದ್ನಂತೆ ಆ ನಿರ್ದೇಶಕ!! ಯಾಕಂತೆ ಗೊತ್ತಾ?

Leave A Reply

Your email address will not be published.