Chetan Kumar: ಅಶ್ವಥ್ ನಾರಾಯಣ್ ವಿರುದ್ಧದ ಕೇಸ್‌ ಬಗ್ಗೆ ನಟ ಚೇತನ್ ಹೇಳಿದ್ದೇನು ಗೊತ್ತಾ?

Actor Chetan Kumar statement on Congress filing FIR against Ashwath Narayan

Share the Article

Chetan Kumar: ಮಂಡ್ಯ: ಫೆಬ್ರವರಿ 16 ರಂದು ಮಂಡ್ಯದ ಸಮಾರಂಭವೊಂದರಲ್ಲಿ ಮಾಜಿ ಸಚಿವ ಸಿಎನ್ ಅಶ್ವತ್ಥ ನಾರಾಯಣ ಅವರು ʻಸಿದ್ದರಾಮಯ್ಯ ಅವರನ್ನು ಮುಗಿಸಬೇಕುʼ ವಿವಾದಾತ್ಮಕ ಹೇಳಿಕೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಸದಾ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪ್ರಖ್ಯಾತಿ ಗಳಿಸಿದ ನಟ ಚೇತನ್ ( Chetan Kumar) ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿ, ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದ ಕಾಂಗ್ರೆಸ್‌ ಅಹಂಕಾರ ತೋರುತ್ತಿದೆ. ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ ಕಾಂಗ್ರೆಸ್ ಕ್ಷುಲ್ಲಕ ಮತ್ತು ಸೇಡಿನ ರಾಜಕಾರಣ ಮಾಡುವ ಬದಲು ಜನರ ಸೇವೆಯನ್ನು ನಿಷ್ಠೆಯಿಂದ ಮಾಡಲಿ ಎಂದಿದ್ದಾರೆ.

ಮಂಡ್ಯದ ಸಾತನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಅಂಥ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದಲ್ಲದೇ, ಭಾರೀ ಆಕ್ರೋಶ ವ್ಯಕ್ತವಾಗಿತ್ತು. ರಾಜ್ಯದ ಹಲವು ಭಾಗಗಳಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕೇಸ್‌ ನೀಡಿ ಎಫ್‌ಐಆರ್‌ ದಾಖಲಿಸಿದ್ದರು ಇದೀಗ ಮಂಡ್ಯ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Karnataka cabinet: ಸಿದ್ದು ಸರ್ಕಾರದ ಪೂರ್ಣ ಕ್ಯಾಬಿನೆಟ್ ರಚನೆಗೆ ಹೈಕಮಾಂಡ್ ಒಪ್ಪಿಗೆ! ದೇಶಪಾಂಡೆ, ಹರಿಪ್ರಸಾದರಿಗಿಲ್ಲ ಮಂತ್ರಿಗಿರಿ; ಇಲ್ಲಿದೆ ನೋಡಿ ನೂತನ ಸಚಿವರ ಪಟ್ಟಿ!!

Leave A Reply