Koppal Anjanadri temple: ಕೊಪ್ಪಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ : 28,79ಲಕ್ಷ ಸಂಗ್ರಹ
Koppal Anjanadri Temple Hundi Counting Work Collection of 28.79 Lakhs
Koppal Anjanadri Temple: ಕೊಪ್ಪಳ : ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದಲ್ಲಿ (Koppal Anjanadri Temple) ಮುಜರಾಯಿ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಸಲಾಗಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ಹಲವು ಭಕ್ತರು ಭಾಗಿಯಾಗಿದ್ದು, ಭರ್ಜರಿಯಾಗಿ ಎಣಿಕೆ ಕಾರ್ಯ ನಡೆಸಿದ್ದಾರೆ. ಈ ಬಾರಿ 4 ವಿದೇಶಿ ನಾಣ್ಯ ಸೇರಿದಂತೆ 28,79,910 ರೂ ಸಂಗ್ರಹವಾಗಿದೆ. ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿ ಪತ್ತೆಯಾಗಿತ್ತು.
ಅಲ್ಲದೇ ಏಣಿಕೆ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿತ್ತು. ಕಳೆದ ಬಾರಿ ಮಾರ್ಚ್ 29 ರಂದು ಕಾಣಿಕೆ ಹುಂಡಿ ಎಣಿಕೆ ಕಾರ್ಯದಲ್ಲಿ 10.64 ಲಕ್ಷ ರೂಪಾಯಿ ಸಂಗ್ರಹವಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: IAS transfer: ಮತ್ತೆ ಐಎಎಸ್ ಅಧಿಕಾರಿಗಳ ವರ್ಗಾವಣೆ ; ಗೌರವ ಗುಪ್ತ ಕೆಪಿಸಿಎಲ್’ಗೆ ನೇಮಕ!