Nalin Kumar kateel: ಪ್ರವೀಣ್ ಪತ್ನಿಗೆ ಕಾಯಂ ಉದ್ಯೋಗ ನೀಡುವಂತೆ ಸಿಎಂಗೆ ನಳಿನ್ ಕುಮಾರ್ ಕಟೀಲ್ ಪತ್ರ; ಮುಂದಿರೋ ಸಾಧ್ಯತೆಗಳೇನು?
Nalin Kumar Kateel letter to CM to give permanent job to Praveen wife
Nalin Kumar kateel: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen nettar) ಅವರ ಪತ್ನಿ ನೂತನ ಕುಮಾರಿ ಅವರಿಗೆ ಅನುಕಂಪದ ಆಧಾರದಲ್ಲಿ ದ.ಕ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೆಲಸ ನೀಡಲಾಗಿತ್ತು. ಆದರೀಗ ರಾಜ್ಯದಲ್ಲಿ ಸರ್ಕಾರ ಬದಲಾದ ಕೂಡಲೆ, ನೂತನ ಕುಮಾರಿಯವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿತ್ತು. ಆದರೀಗ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ (Praveen Nettaru wife Nuthana Kumari) ಕಾಯಂ ಉದ್ಯೋಗ ನೀಡುವಂತೆ ಸಿಎಂ ಸಿದ್ದರಾಮಯ್ಯ(CM Siddaramaiah) ಅವರಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು (Nalin Kumar kateel) ಹೇಳಿದ್ದಾರೆ.
ಹೌದು, ನೂತನ ಕುಮಾರಿ ಅವರಿಗೆ ಕಾಯಂ ಉದ್ಯೋಗ ಕೊಡಿಸಲು ಕಾನೂನಾತ್ಮಕ ತೊಡಕು ಇತ್ತು. ಕಾನೂನು ಅಭಿಪ್ರಾಯ ಪಡೆದುಕೊಂಡು ಆರು ತಿಂಗಳೊಳಗೆ ಅವರ ಉದ್ಯೋಗ ಖಾಯಂಗೊಳಿಸಲು ಚಿಂತನೆ ಮಾಡಲಾಗಿತ್ತು. ಆದರೆ ಅಷ್ಟರೊಳಗೆ ರಾಜ್ಯದಲ್ಲಿ ನಮ್ಮ ಸರಕಾರ ಅಧಿಕಾರ ಕಳೆದುಕೊಂಡಿತು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಮುಂದಿನ ದಿನಗಳಲ್ಲಿ ನೂತನ ಕುಮಾರಿಗೆ (Praveen Nettaru wife Nuthana Kumari) ಕಾಯಂ ಉದ್ಯೋಗ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.
ಮಂಗಳೂರಿನ(Mangalore) ಲ್ಲಿ ಶನಿವಾರ ( ಮೇ 27) ಮಾತನಾಡಿದ ಅವರು ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಅನುಕಂಪದ ಆಧಾರದಲ್ಲಿ ಹಿಂದಿನ ಸಿಎಂ ಬೊಮ್ಮಾಯಿ ಅವರ ವಿಶೇಷಾಧಿಕಾರದಲ್ಲಿ ಸರಕಾರಿ ಉದ್ಯೋಗ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಅವರನ್ನು ಕೆಲಸದಿಂದ ವಜಾಗೊಳಿಸುವ ಕಾರ್ಯ ಮಾಡಿದೆ. ಆದ್ದರಿಂದ ಅನುಕಂಪದ ಆಧಾರದಲ್ಲಿ ಅವರಿಗೆ ಕೆಲಸ ನೀಡಿರುವುದರಿಂದ ಅವರ ವೃತ್ತಿಯನ್ನು ಮುಂದುವರಿಸಬೇಕೆಂದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ವಿನಂತಿ ಮಾಡಿದರು.
ಇಷ್ಟಾದರೂ ಒಂದು ವೇಳೆ ಆ ಬಳಿಕವೂ ರಾಜ್ಯ ಸರ್ಕಾರ ಅವರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದರೆ ಕೇಂದ್ರ ಸರಕಾರ ಪ್ರಾಯೋಜಿತ ಎನ್ಎಂಪಿಎನಲ್ಲಿ ಉದ್ಯೋಗ ಕೊಡಿಸುವ ಕಾರ್ಯ ಮಾಡಲಾಗುತ್ತದೆ ಎಂದು ಹೇಳಿದರು.
ಅಂದಹಾಗೆ ಕಳೆದ 2022 ರ ಜುಲೈ(July) 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು. ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭರವಸೆ ನೀಡಿದ್ದರು.
ಅದರಂತೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Bommai) ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ 2022ರ ಸೆಪ್ಟೆಂಬರ್ 22ರಂದು ಆದೇಶ ಹೊರಡಿಸಲಾಗಿತ್ತು. ಆದರೆ ಪ್ರವೀಣ್ ಪತ್ನಿ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಕೆಲಸ ನೀಡಲಾಗಿತ್ತು. ಕಳೆದ ಅಕ್ಟೋಬರ್(October)14 ರಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು. ಆಕೆಗೆ ವಿಪತ್ತು ನಿರ್ವಹಣಾ ಇಲಾಖೆಯಲ್ಲಿ ಕೆಲಸ ನೀಡಲಾಗಿತ್ತು.
ಇದನ್ನು ಓದಿ: Mahesh Babu: ವಿದೇಶಿ ಮಹಿಳೆಯರ ಜತೆಗಿನ ಸಂಪರ್ಕದಿಂದಲೇ ಮಹೇಶ್ ಬಾಬು ಯಂಗ್ ಆಗಿ ಕಾಣೋದು, ವಿವಾದ ಸೃಷ್ಟಿಸಿದ ಹೇಳಿಕೆ