ಪ್ರವೀಣ್ ನೆಟ್ಟಾರ್ ಪತ್ನಿಗೆ ಮತ್ತೆ ಮರು ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಘೋಷಣೆ !
Praveen Nettar: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettar)ಪತ್ನಿ ನೂತನಕುಮಾರಿಯವರನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಆಗಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದಿದ್ದಾರೆ.
ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150 ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸರ್ಕಾರಿ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ನಮ್ಮ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ಒಂದು ವಿಶೇಷ ಪ್ರಕರಣವೆಂದು ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ. ಘಟನೆಗೆ ಕ್ಷಿಪ್ರವಾಗಿ ಸ್ಪಂದಿಸಿದ ಸಿದ್ದರಾಮಯ್ಯನವರಿಗೆ ಒಂದು ಶಹಬಾಸ್.
ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರ್ ರ ಪತ್ನಿ ನೂತನ ಕುಮಾರಿಯವರ ಉದ್ಯೋಗ ಕಳೆದುಹೋದ ಸುದ್ದಿ ಹಬ್ಬುತ್ತಿದ್ದಂತೆ ರಾಜ್ಯದೆಲ್ಲೆಡೆ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು. ಮುಖ್ಯವಾಗಿ ಬಿಜೆಪಿ ಕಾರ್ಯಕರ್ತರುಗಳು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ಆದರೆ ಇದೀಗ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೂತನ ಕುಮಾರಿಯವರು ಸೇರಿ ಇತರ 150 ಮಂದಿ ತಾತ್ಕಾಲಿಕ ನೇಮಕಾತಿಯಿಂದ ರದ್ದತಿಗೊಂಡ ನೌಕರರನ್ನು ಮರುನೇಮಕ ಮಾಡುವುದಾಗಿ ಘೋಷಿಸಿದ್ದಾರೆ. ಒಟ್ಟಾರೆ ಘಟನೆಯಿಂದ ಬಿಜೆಪಿಗೆ ದಕ್ಷಿಣ ಕನ್ನಡದಲ್ಲಿ ಮತ್ತೆ ಮುಖಭಂಗವಾಗಿದೆ.

ಮಾನವೀಯತೆ ನೆಲೆಯಲ್ಲಿ ಸಿದ್ದರಾಮಯ್ಯನವರು ಈ ನಿರ್ಧಾರ ಕೈಗೊಂಡಿರುವ ಹೇಳಿದ್ದಾರೆ.ಇದೀಗ ತಾನೆ ಅಧಿಕಾರ ವಹಿಸಿಕೊಂಡು ಮಂತ್ರಿಮಂಡಲ ರಚಿಸುತ್ತಿರುವ ಸಿದ್ದರಾಮಯ್ಯನವರ ಈ ನಡೆ ರಾಜ್ಯಾದ್ಯಂತ ಮೆಚ್ಚುಗೆಗೆ ಕಾರಣವಾಗಿದೆ.