ಬದಲಾದ ಸರಕಾರ: ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ

Praveen nettar wife job quit

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen nettar) ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. (wife job quit)

 

ಕಳೆದ 2022 ರ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು. ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭರವಸೆ ನೀಡಿದ್ದರು.

ಅದರಂತೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ 2022ರ ಸೆಪ್ಟೆಂಬರ್ 22ರಂದು ಆದೇಶ ಹೊರಡಿಸಲಾಗಿತ್ತು. ಆದರೆ ಪ್ರವೀಣ್ ಪತ್ನಿ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಕೆಲಸ ನೀಡಲಾಗಿತ್ತು. ಕಳೆದ ಅಕ್ಟೋಬರ್ 14 ರಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು. ಆಕೆಗೆ ವಿಪತ್ತು ನಿರ್ವಹಣಾ ಇಲಾಖೆಯಲ್ಲಿ ಕೆಲಸ ನೀಡಲಾಗಿತ್ತು.

ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ಅವರ ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು ಎನ್ನಲಾಗಿದೆ. ಇದೀಗ ಸರಕಾರ ಬದಲಾಗಿದ್ದು, ನೂತನ ಕುಮಾರಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ವರದಿಯಾಗಿದೆ.

“ಸರ್ಕಾರಗಳು ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ತಮ್ಮನ್ನು ಮುಂದುವರಿಸಲು ನೂತನಕುಮಾರಿಯವರು ಕೋರಿದರೆ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು” ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಪಕ್ಷವು ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟರ್ ಪತ್ನಿ ನೂತನ ಕುಮಾರಿಯವರಿಗೆ ಕೆಲಸ ನೀಡಿ, ಬಿಜೆಪಿಯು ದೊಡ್ಡ ಮಟ್ಟದ ಪ್ರಚಾರ ಪಡೆದುಕೊಂಡಿತ್ತು. ಇದೀಗ ಬಿಜೆಪಿ ಪಕ್ಷದ ಸರ್ಕಾರ ನೀಡಿರುವ ತಾತ್ಕಾಲಿಕ ಕೆಲಸ ಎಗರಿ ಹೋಗಿದೆ. ಯಾರನ್ನು ದೂರಬೇಕು ತಾತ್ಕಾಲಿಕ ಕೆಲಸ ಕೊಡಿಸಿದ ಬಿಜೆಪಿಯನ್ನಾ ಅಥವಾ ಉದ್ಯೋಗದಿಂದ ಬಿಡುಗಡೆ ಮಾಡಿದ ಕಾಂಗ್ರೆಸ್ ಆನ್ನಾ? ಜನ ಯೋಚಿಸುತ್ತಿದ್ದಾರೆ…!!!

Leave A Reply

Your email address will not be published.