Committed suicide: ಕಡಬದ ಯುವಕ ಮಸ್ಕತ್‌ನಲ್ಲಿ ಆತ್ಮಹತ್ಯೆ : 8 ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಹೋಗಿದ್ದ ಯುವಕ

Youth from Kadaba commits suicide in Muscat

Committed suicide: ಕಡಬ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Committed suicide) ಮಾಡಿಕೊಂಡ ಘಟನೆ ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ.

ಇವರು ಕೊಲ್ಲಿರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು. ಇವರ ಸಂಬಂಧಿ ಯುವಕ ಕೊಯಿಲ ಗ್ರಾಮದ ಅಂಬಾ ನಿವಾಸಿ ಚರಣ್ ಎಂಬ ಯುವಕ ಕೂಡ ಮಸ್ಕತ್‌ನಲ್ಲಿ ಉದ್ಯೋಗದಲ್ಲಿದ್ದು ಇವರು ಇನ್ನೊಂದು ಕೊಠಡಿಯಲ್ಲಿ ವಾಸವಾಗಿದ್ದಾರೆ. ಸಂದೇಶ್ ಅವರು ಬೇಗ ಕರ್ತವ್ಯ ಮುಗಿಸಿ ಕೊಠಡಿಗೆ ಆಗಮಿಸಿ ಮಧ್ಯಾಹ್ನದ ಒಳಗೆ ಸುಮಾರು 10.30ರ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಂದೇಶ್ ಇರುವ ಕೊಠಡಿಗೆ ಬಂದು ನೋಡಿದಾಗ ಕೊಠಡಿ ಬಾಗಿಲು ಬಂದ್ ಆಗಿತ್ತು. ಕದ ತಟ್ಟಿದರೆ ಯಾವುದೇ ಉತ್ತರ ಬಾರದೇ ಹೋದಾಗ ಸಂಶಯಗೊಂಡು ಗಾಬರಿಯಿಂದ ಸಂದೇಶ್ ಸಹೋದರ ಸಂತೋಷ್‌ಗೆ ಕರೆ ಮಾಡಿ ಕರೆಸಿಕೊಂಡಿದ್ದಾರೆ. ಕೊಠಡಿಯ ಒಂದು ಕೀ ಸಂತೋಷ್ ಅವರಲ್ಲಿ ಇದ್ದುದರಿಂದ ಬಾಗಿಲು ತೆರೆದು ನೋಡುವಾಗ ಕೊಠಡಿಯ ಒಳಗಿನ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿ ಕಂಡು ಬಂತು. ಯುವಕ ಮೃತಪಟ್ಟಿರುವುದು ಆಗಲೆ ದೃಢಪಟ್ಟಿತ್ತು. ಆ ದೇಶದ ನಿಯಮಾಳಿಗಳ ಪ್ರಕಾರ ಮರಣೋತ್ತರ ಪರೀಕ್ಷೆಗಳ ಪ್ರಕ್ರಿಯೆ ಮುಗಿದು ಮಂಗಳವಾರ ಅಥವಾ ಬುಧವಾರ ಮೃತದೇಹ ಊರಿಗೆ ಆಗಮಿಸುವ ನಿರೀಕ್ಷೆ ಇದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.

 

ಇದನ್ನು ಓದಿ: Andhra Pradesh: ಪತಿಯ ಶವಸಂಸ್ಕಾರವನ್ನು ಮನೆಯಲ್ಲಿಯೇ ಮಾಡಿದ ಪತ್ನಿ ; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!!

Leave A Reply

Your email address will not be published.