Jammu and Kashmir: ಜಮ್ಮು ಕಾಶ್ಮೀರದಲ್ಲಿ ಬಸ್‌ ಕಂದಕಕ್ಕೆ ಬಿದ್ದು, ಸ್ಥಳದಲ್ಲೇ 10ಮಂದಿ ದಾರುಣ ಸಾವು!

Jammu and Kashmir National Highway 10 people dead

Share the Article

ಜಮ್ಮು ಕಾಶ್ಮೀರದಲ್ಲಿ ಬಸ್‌ ಒಂದು ಕಂದಕಕ್ಕೆ ಬಿದ್ದಿದ್ದು, ಇದರ ಪರಿಣಾಮವಾಗಿ ಸ್ಥಳದಲ್ಲೇ 10ಮಂದಿ ದಾರುಣವಾಗಿ ಸಾವನ್ನಪ್ಪಿದ್ದ ಘಟನೆಯೊಂದು ನಡೆದಿದೆ.

ಜಮ್ಮು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಬಸ್‌ ಅಮೃತಸರದಿಂದ ಕತ್ರಾಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಆಳವಾದ ಕಮರಿಗೆ ಬಿದ್ದು ಈ ದುರ್ಘಟನೆ ನಡೆದಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ:America Shootout: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ!

Leave A Reply