Five guarantees: ನಾಳೆ ಮಧ್ಯಾಹ್ನ 12ಕ್ಕೆ ಸಚಿವ ಸಂಪುಟ ಸಭೆ : ಐದು ಗ್ಯಾರಂಟಿ ಜಾರಿಗೆ ಅಧಿಕೃತ ಆದೇಶ ಸಾಧ್ಯತೆ

possibility of an official order to implement five guarantees

Five guarantees: ಬೆಂಗಳೂರು : ನಾಳೆ ಮಧ್ಯಾಹ್ನ 12ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಐದು ಗ್ಯಾರಂಟಿಗಳನ್ನು (Five guarantees) ಜಾರಿಗೊಳಿಸಿ ಅಧಿಕೃತ ಆದೇಶ ಸಾಧ್ಯತೆ.

 

ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದ ಕಾಂಗ್ರೆಸ್‌ ಸರ್ಕಾರಕ್ಕೆ ಆಡಳಿತ ನಡೆಸುತ್ತಿದ್ದು, ಚುನಾವಣಾ ಪ್ರಚಾರದ ವೇಳೆ ಘೋಷಣೆ ಮಾಡಿದ್ದ 5 ಗ್ಯಾರಂಟಿಗಳ ಜಾರಿಗೆ ಪರ ವಿರೋಧವಾಗಿ ಭಾರೀ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ನಾಳೆ ಮಧ್ಯಾಹ್ನ 12ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿ ಅಧಿಕೃತ ಆದೇಶ ಸಾಧ್ಯತೆಯಿದ್ದು, ಜನರ ಭರವಸೆಯನ್ನು ಇಡೇರಿಸುತ್ತಾರಾ ಅನ್ನೋದನ್ನು ಕಾದು ನೋಡಬೇಕಾಗಿದೆ.

 

ಇದನ್ನು ಓದಿ: EPFO: EPFO ಚಂದಾದಾರರಿಗೆ ಗುಡ್ ನ್ಯೂಸ್! ಇನ್ನು ಮುಂದೆ ಕುಳಿತಲ್ಲಿಯೇ ಲಭ್ಯವಿದೆ ಈ ಸೇವೆಗಳು! 

Leave A Reply

Your email address will not be published.