

Ganga River: ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಬೇಸತ್ತ ಕುಸ್ತಿಪಟುಗಳು (Wrestlers) ತಮ್ಮ ಪದಕಗಳನ್ನು (Medals) ಗಂಗಾ ನದಿಯಲ್ಲಿ (Ganga River) ವಿಸರ್ಜಿಸಲು ಮುಂದಾಗಿದ್ದು, ಸದ್ಯ ಅವರನ್ನು ರೈತ ಮುಖಂಡರು ತಡೆದಿದ್ದಾರೆ.
ಹೌದು, ಸರ್ಕಾರ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಹಾಗೂ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಬೇಸತ್ತ ಕುಸ್ತಿಪಟುಗಳು (Wrestlers) ಮಂಗಳವಾರ, ತಮ್ಮ ಪದಕಗಳನ್ನು ಗಂಗಾ ನದಿಗೆ (Ganga) ಎಸೆಯಲು ನಿರ್ಧರಿಸಿದ್ದರು. ಇದಕ್ಕಾಗಿ ತಾವು ಗೆದ್ದ ಪದಕಗಳನ್ನು ತೆಗೆದುಕೊಂಡು ಕುಸ್ತಿಪಟುಗಳು ಹರಿದ್ವಾರಕ್ಕೆ (Haridwara) ಬಂದಿದ್ದರು. ಈ ಹೊತ್ತಲ್ಲಿ ರೈತರ ನಾಯಕ ನರೇಶ್ ಟಿಕಾಯತ್ (Naresh Tikait) ಅವರನ್ನು ತಡೆದಿದ್ದಾರೆ.
ನಿನ್ನೆ ಸಂಜೆ 6 ಗಂಟೆಗೆ ಹರಿದ್ವಾರದ ಬಳಿ ಗಂಗಾ ನದಿಯಲ್ಲಿ ಎಸೆಯುವುದಾಗಿ ಪ್ರಕಟಿಸಿದ್ದರು. ಗಂಗೆಯಲ್ಲಿ ಪದಕಗಳನ್ನು ವಿಸರ್ಜಿಸಲು ಮುಂದಾದಾಗ ಈ ಹೊತ್ತಲ್ಲಿ ರೈತರ ನಾಯಕ ನರೇಶ್ ಟಿಕಾಯತ್ (Naresh Tikait) ಅವರು ಹರಿದ್ವಾರದ ಹರ್ ಕಿ ಪೌರಿ ಘಾಟ್‌ಗೆ ಆಗಮಿಸಿದ್ದಾರೆ. ಅಲ್ಲಿ ಕುಸ್ತಿಪಟುಗಳೊಂದಿಗೆ ಮಾತನಾಡಿ ಅವರು ನೀವು ಕಷ್ಟಪಟ್ಟು ಸಂಪಾದಿಸಿದ ಪದಕಗಳನ್ನು ಪವಿತ್ರ ನದಿಯಾದ ಗಂಗಾದಲ್ಲಿ ಬಿಸಾಡುವ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯಿಸಿದ ನಂತರ ಕುಸ್ತಿಪಟುಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ನಂತರ ಕುಸ್ತಿಪಟುಗಳು ತಮ್ಮ ಪದಕಗಳನ್ನು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ನರೇಶ್ ಟಿಕಾಯತ್ ಅವರಿಗೆ ಹಸ್ತಾಂತರಿಸಿದ್ದಾರೆ. ಬಳಿಕ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿದ ನರೇಶ್ ಟಿಕಾಯತ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರೆ. ಮುಂದಿನ 5 ದಿನಗಳೊಳಗೆ ಬ್ರಿಜ್ ಭೂಷಣ್ ಬಂಧನವಾಗದಿದ್ದರೆ ಮತ್ತೆ ಹರಿದ್ವಾರಕ್ಕೆ ಬಂದು ಪದಕಗಳನ್ನು ವಿಸರ್ಜಿಸುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಹಲವು ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರು. ನೂತನ ಸಂಸತ್ ಭವನದತ್ತವೂ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದರು. ಕೊನೆಗೆ ಬೇಸತ್ತ ಕ್ರೀಡಾಪಟುಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ಇದಕ್ಕೂ ಮುನ್ನ ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹೇಳಿಕೆಯನ್ನು ಹಂಚಿಕೊಂಡ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಈ ಪದಕಗಳು ನಮ್ಮ ಜೀವನ ಮತ್ತು ಆತ್ಮ. ನಾವು ಅವುಗಳನ್ನು ಗಂಗೆಯಲ್ಲಿ ಬಿಸಾಡಲಿದ್ದೇವೆ,ಏಕೆಂದರೆ ಅವಳು ಮಾ ಗಂಗಾ. ಅದರ ನಂತರ, ಬದುಕುವುದರಲ್ಲಿ ಅರ್ಥವಿಲ್ಲ, ಹಾಗಾಗಿ ನಾವು ಇಂಡಿಯಾ ಗೇಟ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದಿದ್ದಾರೆ.













