Free busfor students: ಇನ್ನು ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೂ ಬಸ್ ಫ್ರೀ, ಆದರೆ ಎಲ್ಲಿಯತನಕ ಅನ್ನೋದೇ ಸಸ್ಪೆನ್ಸ್ !
Free bus services for all school students
Free busfor students: ಇದೀಗ ರಾಜ್ಯ ಸರ್ಕಾರವು ರಾಜ್ಯಾದ್ಯಂತ ಎಲ್ಲಾ ಶಾಲಾ ಮಕ್ಕಳಿಗೂ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ (KSRTC Bus Pass) ಉಚಿತ ಸೌಲಭ್ಯ ನೀಡಲು ನಿರ್ಧರಿಸಿದೆ. ಹೌದು, 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಇಂದು ಬುಧವಾರ ಮೇ 31 ರಿಂದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಶುರುವಾಗಿವೆ. ಈಗ ರಾಜ್ಯದ ಎಲ್ಲಾ ಮಹಿಳೆಯರಿಗೆ ಸಾರಿಗೆ ವ್ಯವಸ್ಥೆ ಉಚಿತ ಎಂದಿರುವ ಸರ್ಕಾರದ ನಿಯಮದ ರೀತಿಯಲ್ಲಿಯೇ ಶಾಲಾ ಮಕ್ಕಳಿಗೂ (Free busfor students) ಭರ್ಜರಿ ಉಡುಗೊರೆ ಲಭ್ಯ ಆಗಿದೆ. ಆದರೆ ಈ ಉಚಿತ ಸೌಲಭ್ಯವು ಲಿಮಿಟೆಡ್ ಪೀರಿಯಡ್ ಆಫರ್ ಆಗಿದೆ.
ಈ ಹಿನ್ನೆಲೆಯಲ್ಲಿ ಬಸ್‌ಗಳಲ್ಲಿ ಬರುವ ಮಕ್ಕಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತಾತ್ಕಾಲಿಕ ರಿಲೀಫ್ ನೀಡಿದೆ. 15 ದಿನಗಳವರೆಗೆ ಮಕ್ಕಳು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣ ಮಾಡಲು ಸಂಸ್ಥೆಯು ಅವಕಾಶ ಕಲ್ಪಿಸಿದೆ.
2023-24ನೇ ಸಾಲಿನ ವಿದ್ಯಾರ್ಥಿ ಪಾಸ್‌ಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ. ಹೀಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಬಸ್ ಪಾಸ್ ಅನ್ನು ಮಾಡಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಇಡಿಸಿಎಸ್ ಇಲಾಖೆಯು ಪಾಸ್ ವಿತರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸ್ ಪಡೆಯಲು ಕಾಲಾವಕಾಶವನ್ನು ನೀಡಲಾಗಿದೆ. ಅಲ್ಲಿಯ ತನಕ ಮಕ್ಕಳಿಗೆ ಮಹಿಳೆಯರ ರೀತಿಯಲ್ಲಿಯೇ ಉಚಿತ ಸೌಲಭ್ಯ ದೊರೆಯಲಿದೆ.
ದಿನಾಂಕ 15.06.2023 ರವರೆಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಲಾಗಿದೆ. 2022-23ನೇ ಸಾಲಿನ ವಿದ್ಯಾರ್ಥಿಗಳು ತಮ್ಮ ಹಳೆಯ ಬಸ್ ಪಾಸ್ ಇಲ್ಲವೇ ಪ್ರಸಕ್ತ ವರ್ಷದಲ್ಲಿ ಶಾಲಾ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಸೀದಿಯನ್ನು ತೋರಿಸಿಯೂ ಪ್ರಯಾಣ ಮಾಡಬಹುದು ಎಂದು KSRTC ನಿರ್ದೇಶಕರು ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಈ ಹಿಂದೆ ಪದವಿ ವಿದ್ಯಾರ್ಥಿಗಳು, ಸ್ನಾತಕೋತ್ತರ, ಡಿಪ್ಲೊಮಾ ಬಿ ಫಾರ್ಮಾ ಸೇರಿದಂತೆ ವಿವಿಧ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕೂಡಾ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿ ಕೆಎಸ್‌ಆರ್‌ಟಿಸಿ ಆದೇಶವನ್ನು ಹೊರಡಿಸಿತ್ತು.
ಇದನ್ನು ಓದಿ: ದಕ್ಷಿಣ ಕನ್ನಡ : ಆಲಂಕಾರಿನಲ್ಲಿ ಬಸ್‌ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು