Sunil kumar: ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣ!? ಮಾಜಿ ಸಚಿವರು ಹೇಳಿದ್ದೇನು?
Women should be allowed to travel free of cost in private buses too Sunil Kumar
Sunil kumar: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ(Congress Government) 5 ಗ್ಯಾರಂಟಿಗಳಲ್ಲಿ(5 Guarantys) ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಸರ್ಕಾರ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಸರ್ಕಾರಿ ಬಸ್‌ಗಳೊಂದಿಗೆ (Govt Bus) ಖಾಸಗಿ ಬಸ್‌ಗಳಲ್ಲಿಯೂ (Private Bus) ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು (Free Travel Facility) ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ (Sunil Kumar) ಆಗ್ರಹಿಸಿದ್ದಾರೆ.
ಹೌದು, ಕಾಂಗ್ರೆಸ್ ಪಕ್ಷವು(Congress party) ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ (Free Travel) ಗ್ಯಾರಂಟಿ ನೀಡಿದೆ. ಆದರೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿ ಖಾಸಗಿ ಬಸ್ಗಳನ್ನು ಅವಲಂಬಿಸಿರುವುದರಿಂದ ಈ ನಾಲ್ಕು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸುನಿಲ್ ಕುಮಾರ್ (Sunil Kumar) ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್‌ನಲ್ಲೇನಿದೆ?
ಉಡುಪಿ(Udupi), ದಕ್ಷಿಣ ಕನ್ನಡ(Dakshina kannada) ಹಾಗೂ ಶಿವಮೊಗ್ಗ(Shivamogga) ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್‌ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಬರೆದಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. (1/2)
— Sunil Kumar Karkala (@karkalasunil) May 30, 2023
ಅಂದಹಾಗೆ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ನಿನ್ನೆ ದಿನ (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಕಾರ್ಡ್ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಭೆ ಬಳಿಕ ರಾಮಲಿಂಗರೆಡ್ಡಿ(Ramalinga reddy) ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: Shocking news: ಕರೆಂಟ್ ಬಿಲ್ ಕಟ್ಟದ ರಾಜ್ಯದ ಜನತೆಗೆ ಶಾಕ್ ನೀಡಿದ ರಾಜ್ಯ ಸರ್ಕಾರ! ಮುಖ್ಯಮಂತ್ರಿಗಳೇ ಈ ನಿಮ್ಮ ನಡೆ ಸರಿಯೇ?