The Kerala Story OTT Release: ‘ದಿ ಕೇರಳ ಸ್ಟೋರಿ’ ಚಿತ್ರ ಶೀಘ್ರದಲ್ಲೇ ಒಟಿಟಿಯಲ್ಲಿ ಬಿಡುಗಡೆ ; ಎಲ್ಲಿ ವೀಕ್ಷಿಸಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ

The Kerala Story OTT Released soon

The Kerala Story: ದೇಶಾದ್ಯಂತ ವಿವಾದದ ಕಿಡಿಯಿಂದಲೇ ಸದ್ದು ಮಾಡಿದ ‘ಲವ್‌ ಜಿಹಾದ್‌’ (love jihad) ಕಥೆಯಾಧಾರಿತ ಹಿಂದಿ ಸಿನಿಮಾ ‘ದಿ ಕೇರಳ ಸ್ಟೋರಿ’ ಸಿನಿಮಾ ಇದೀಗ ಭರ್ಜರಿ ಗಳಿಕೆ ಕಂಡು ಒಟಿಟಿಯತ್ತ ಹೆಜ್ಜೆ ಹಾಕಿದೆ. ಹೌದು, ಸುದೀಪ್ತೊ ಸೇನ್ (Sudeepto Sen) ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರ ಶೀಘ್ರದಲ್ಲೇ ಒಟಿಟಿಯಲ್ಲಿ ರಿಲೀಸ್ (The Kerala Story ) ಆಗಲಿದೆ.

 

‘ದಿ ಕೇರಳ ಸ್ಟೋರಿ’ ಚಿತ್ರದ OTT ಹಕ್ಕುಗಳನ್ನು ZEE 5 ಖರೀದಿಸಿದೆ ಎನ್ನಲಾಗಿದೆ. ಶೀಘ್ರದಲ್ಲೇ ಈ ಸಿನಿಮಾ ZEE 5 ನಲ್ಲಿ ರಿಲೀಸ್‌ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಮತ್ತು ಚಿತ್ರದ ನಿರ್ಮಾಪಕರು ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಇನ್ನು ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಮೇ 5ರಂದು ದೇಶದಾದ್ಯಂತ ರಿಲೀಸ್ ಆಗಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕ್ರಮೇಣ ಈ ಸಿನಿಮಾದ ಬಗ್ಗೆ ಹಲವರು ಧ್ವನಿ ಎತ್ತಿದ್ದು, ಹಲವೆಡೆ ಬ್ಯಾನ್ ಕರೆ ಕೇಳಿ ಬಂದಿತ್ತು. ಈ ಎಲ್ಲಾ ವಿವಾದಗಳ ಮಧ್ಯೆ ಸಿನಿಮಾ ಉತ್ತಮ ಪ್ರದರ್ಶನ ಕಂಡಿತ್ತು. ಸಾಕಷ್ಟು ಗಳಿಕೆ ಮಾಡಿದೆ. ಇಲ್ಲಿಯವರೆಗೆ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್‌ 200 ಕೋಟಿ ಗಡಿ ದಾಟಿದೆ.

ಸುದೀಪ್ತೊ ಸೇನ್ (Sudeepto Sen) ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಅದಾ ಶರ್ಮಾ (Ada Sharma), ಯೋಗಿತಾ ಬಿಹಾನಿ (Yogita Bihani) ಹಾಗೂ ಸೋನಿಯಾ ಬಾಲಾನಿ ಲೀಡ್‌ (Sonia Balani leed) ರೋಲ್‌ಗಳಲ್ಲಿ ನಟಿಸಿದ್ದಾರೆ.

 

ಇದನ್ನು ಓದಿ: IB Recruitment 2023: ಗುಪ್ತಚರ ಇಲಾಖೆ ಹುದ್ದೆಗೆ ಅರ್ಜಿ ಆಹ್ವಾನ ; ವೇತನ 81 ಸಾವಿರ! ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ 

Leave A Reply

Your email address will not be published.