Guest Lecture Recruitment: ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಗ್ರೀನ್ ಸಿಗ್ನಲ್!

Green signal for recruitment of 4055 guest lecturers in pre-degree colleges

Guest lecture recruitment: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, 2023-24 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಗಳಲ್ಲಿ ಖಾಲಿ ಇರುವ 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ (Guest lecture recruitment) ಸರ್ಕಾರ ಸೂಚನೆ ನೀಡಿದೆ.

 

ಈಗಾಗಲೇ 2023 -24ನೇ ಶೈಕ್ಷಣಿಕ ಸಾಲಿನ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ  ನೀಡಲಾಗಿದೆ.

 

ಮುಖ್ಯವಾಗಿ ಬಡ್ತಿ, ನಿಧನ, ವಯೋ ನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ. ಅದಲ್ಲದೆ ಕಾರ್ಯಭಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಒಟ್ಟಾರೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ತಿಳಿಸಲಾಗಿದೆ.

 

ಕಳೆದ ಬಾರಿ ಅತಿಥಿ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ ನಿಯಮ ಪಾಲನೆಯಾಗಿಲ್ಲ ಎಂಬ ಆರೋಪವಿದ್ದು, ಈ ಬಾರಿ ನಿಯಮ ನಿಯಮ ಉಲ್ಲಂಘಿಸಿದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

 

ಈ ಕುರಿತು ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರಿಗೆ, ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ 12,000 ರೂ.ವೇತನದಂತೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದು ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ: Dress Code: ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿ, ಶಾರ್ಟ್ಸ್, ಜಾರಿದ ಜೀನ್ಸ್ ತೊಟ್ಟವರಿಗೆ ಪ್ರವೇಶ ನಿಷಿದ್ಧ

Leave A Reply

Your email address will not be published.