Balsore train accident: ಒರಿಸ್ಸಾ ಬಾಲಾಸೋರ್ ರೈಲು ಅಪಘಾತ ಸಿಬಿಐ ತನಿಖೆಗೆ, ಕೇಂದ್ರ ರೈಲು ಮಂತ್ರಿ ಅಶ್ವಿನಿ ವೈಷ್ಣವಿ ಘೋಷಣೆ

CBI probe recommended into Balsore train accident says Ashwini Vaishnaw

Balsore train accident: ಒರಿಸ್ಸಾ, ಭುವನೇಶ್ವರ: ಒಡಿಶಾದಲ್ಲಿ ಸಂಭವಿಸಿದ ಮೂರು ರೈಲುಗಳ ಸರಣಿ ಅಪಘಾತದ (Odisha Train Tragedy) ತನಿಖೆಯ ಜವಾಬ್ದಾರಿಯನ್ನು ಕೇಂದ್ರೀಯ ತನಿಖಾ ಸಂಸ್ಥೆ (CBI) ಹೆಗಲಿಗೆ ವಹಿಸಲಾಗಿದೆ.

ಒರಿಸ್ಸಾದ ಬಾಲಾಸೋರ್ ರೈಲು ಅಪಘಾತ(Balsore train accident) ಸಂಬಂಧ ತನಿಖೆಯನ್ನು ಸಿಬಿಐ ತನಿಖೆಗೆ ರೈಲ್ವೇ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿಯೇ ಬೀಡು ಬಿಟ್ಟಿರುವ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಅವರು ಈಗ ಹೊಂದಿರುವ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ಮಂಡಳಿಯು ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ರೈಲು ಅಪಘಾತದ ತನಿಖೆ ಸಿಬಿಐ ಹೆಗಲಿಗೆ ಬಿದ್ದಿದೆ.

ಬಾಲಸೋರ್‌ನ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದಂತೆ 275 ಮಂದಿ ಮೃತಪಟ್ಟಿದ್ದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸಿಗ್ನಲಿಂಗ್‌ ವ್ಯವಸ್ಥೆಯಲ್ಲಿ ದೋಷ ಪತ್ತೆಯಾಗಿರುವುದು ತಿಳಿದು ಬಂದಿದೆ. ಅದು ಮಾನವ ದೋಷ ಕೂಡಾ ಆಗಿರುವ ಸಾಧ್ಯತೆ ಇದೆ. ನಿಜಕ್ಕೂ ಗೂಡ್ಸ್‌ ರೈಲು ಹಳಿ ತಪ್ಪಿರಲಿಲ್ಲ. ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ (Coromandel Express) ಬೋಗಿಗಳು ಇನ್ನೊಂದು ಮುಖ್ಯ ಹಳಿ ಮೇಲೆ ಬಿದ್ದ ಪರಿಣಾಮ ಗರಿಷ್ಠ ಮಟ್ಟದ ಸಾವು ನೋವು ಸಂಭವಿಸಿದೆ.

ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಬೋಗಿಗಳು ಗಂಟೆಗೆ 125 ಕಿ.ಮೀ ವೇಗದಲ್ಲಿ ಬರುತ್ತಿದ್ದ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ತೀವ್ರ ಸಾವು – ನೋವು ಹೆಚ್ಚಾಗಿದೆ ಎನ್ನಲಾಗಿದೆ. ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ (Electronic Interlocking) ಸಮಯದಲ್ಲಿ ಉಂಟಾದ ಬದಲಾವಣೆಯಿಂದ ಅಪಘಾತ ಸಂಭವಿಸಿರುವುದು ಸದ್ಯಕ್ಕೆ ನಂಬಲಾದ ವಿಷಯ. ಈ ಬದಲಾವಣೆಯನ್ನು ಯಾರು ಮಾಡಿದ್ದಾರೆ ಮತ್ತು ಅದು ಹೇಗೆ ಸಂಭವಿಸಿತು ಎಂಬುದನ್ನು ತಿಳಿಯಲು ಸಿಬಿಐ ತನಿಖೆಗೆ ಈ ಅಪಘಾತವನ್ನು ಈಗ ತಾನೇ ವಹಿಸಲಾಗಿದೆ.

ಇದನ್ನೂ ಓದಿ: ಮಹಿಳೆಯರೇ ಗಮನಿಸಿ: ಉಚಿತ ಪ್ರಯಾಣಕ್ಕೂ ಟಿಕೆಟ್ ಪಡೆಯಲೇ ಬೇಕು, ಜೋಕೆ!

Leave A Reply

Your email address will not be published.