CM Siddaramaiah: 12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

CM Siddaramaiah said that the law allows killing of cows above 12 years

CM Siddaramaiah: ಬೆಂಗಳೂರು : ರಾಜ್ಯದಲ್ಲಿ 12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.

 

ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಹಿಂಪಡೆಯುವ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ.

ಈ ಬೆನ್ನಲ್ಲೆ ಎಮ್ಮೆಗಳನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಹತ್ಯೆ ಮಾಡಬಾರದು ಎಂದು ಪ್ರಶ್ನಿಸಿರುವ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಸಿದ್ದರಾಮಯ್ಯ ಮಾತನಾಡಿ, 12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ಎಂದು ಖಡಕ್‌ ಆಗಿ ಉತ್ತರ ನೀಡಿದ್ದಾರೆ.

‘ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ-2020’ ಇದು 2021 ರಲ್ಲಿ ಜಾರಿಗೆ ಬಂತು. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಮಸೂದೆಯನ್ನು ವಿರೋಧಿಸಿತ್ತು.1964ರ ಕಾಯ್ದೆ ಪ್ರಕಾರ 12 ವರ್ಷ ಮೇಲ್ಪಟ್ಟ ಮತ್ತು ಕೃಷಿ ಚಟುವಟಿಕೆಗಳಲ್ಲಿ ಬಳಸಲು ಸಾಧ್ಯವಾಗದ ಹಸುಗಳ ಹತ್ಯೆ ಮಾಡಲು ಅವಕಾಶವಿದೆ. ಇದನ್ನೇ ವೆಂಕಟೇಶ್ ಕೂಡ ಹೇಳಿದ್ದಾರೆ. ಆದರೆ, ಅವರು ಅದನ್ನು ಸ್ಪಷ್ಟವಾಗಿ ಹೇಳಿಲ್ಲ ಅಷ್ಟೇ, 12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

 

ಇದನ್ನು ಓದಿ: Sakshi Malik: ನಾನು ಪ್ರತಿಭಟನೆಯಿಂದ ಹಿಂದೆ ಸರಿದೇ ಇಲ್ಲ, ಕುಸ್ತಿಪಟು ಸಾಕ್ಷಿ ಮಲಿಕ್ ಸ್ಪಷ್ಟನೆ 

Leave A Reply

Your email address will not be published.