Congress: ಜುಲೈ 3ರಿಂದ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ

Congress government first budget session from July 3

Congress: ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದ ಕಾಂಗ್ರೆಸ್‌ ಸರ್ಕಾರದ ʻಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3ರಿಂದ ಶುರುವಾಗಲಿದೆ.

 

ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದ ಕಾಂಗ್ರೆಸ್‌ ಸರ್ಕಾರ ಅಧಿಕಾರದ ಪಟ್ಟವೇರಿದೆ. ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಸಭೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಘೋಷಣೆ ಮಾಡಿದ್ದ ಪಂಚ ಭರವಸೆಗಳನ್ನು ಇಡೇರಿಸುವಂತೆ ಘೋಷಣೆ ಮಾಡಿದ್ದಾರೆ. ಅಲ್ಲದೇ ಬಹುಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಗೆಲ್ಲಿಸಿದ ಜನರಲ್ಲೂ ಕೊಂಚ ಸಂತಸ ಮೂಡಿಸಿದೆ.

ಇದೀಗ ರಾಜ್ಯ ರಾಜಕೀಯಲ್ಲಿ ಹೊಸ ಸಂಚಲನ ಸೃಷ್ಟಿಸುವ ನೂತನ ಕಾಂಗ್ರೆಸ್ (Congress) ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಡೇಟ್‌ಫಿಕ್ಸ್‌ ಆಗಿದೆ.ಜುಲೈ 3ರಿಂದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ 7 ರಂದು ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನ ಆರಂಭದಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಭಾಷಣ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಇದನ್ನು ಓದಿ: Salman Khan-Katrina Kaif: ಸಲ್ಮಾನ್ ಖಾನ್ ಮದುವೆ ಬಗ್ಗೆ ಹೊಸ ವಿಚಾರ ರಿವೀಲ್ ಮಾಡೇ ಬಿಟ್ರು ಹಳೇ ಲವರ್ ಕತ್ರಿನಾ ಕೈಫ್ 

Leave A Reply

Your email address will not be published.