Grihajyoti Yojana: ಗೃಹಜ್ಯೋತಿ ಮಾರ್ಗಸೂಚಿ ಪ್ರಕಟ: ಉಚಿತ ವಿದ್ಯುತ್ ಪಡೆಯಲು ಇರೋ ಕಂಡೀಷನ್ ಯಾವುವು ಗೊತ್ತಾ ?

Guidelines for Grihajyoti Yojana published

Grihajyoti Yojana: ಬೆಂಗಳೂರು: ಗೃಹಜ್ಯೋತಿ ಯೋಜನೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಯ ಜಾರಿಗೂ ಇದೀಗ ಆದೇಶ ಹೊರಬಿದ್ದಿದೆ. ಗೃಹಜ್ಯೋತಿ ಯೋಜನೆ ಅನುಷ್ಠಾನಗೊಳಿಸಲು ಅನುಸರಿಸಬೇಕಾದ ಕಾರ್ಯವಿಧಾನ ಮತ್ತು ಪಾಲಿಸಬೇಕಾದ ಷರತ್ತು ಮತ್ತು ನಿಬಂಧನೆಗಳ ಬಗ್ಗೆ ಸರ್ಕಾರದಿಂದ ಪ್ರತ್ಯೇಕ ಆದೇಶ ಹೊರಡಿಸಲಾಗಿದೆ.

ಗೃಹ ಜ್ಯೋತಿ” (Grihajyoti Yojana) ಯೋಜನೆಯಡಿ ರಾಜ್ಯದ ಪ್ರತಿಮನೆಗೆ ಮಾಸಿಕ ಗರಿಷ್ಠ 200 ಯೂನಿಟ್‌‌ವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ. 10 ಹೆಚ್ಚಿನ ವಿದ್ಯುತ್ ಬಳಕೆಯ ಮಿತಿಯನ್ನು ಅನುಮತಿಸಿದೆ.

ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕಾಗಿದೆ.

ಈ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ಸಹಾಯಧನ ಮೊತ್ತವನ್ನು ಹಾಗೂ ಮುಂದಿನ ಮಾಹೆಗಳಲ್ಲಿ ನಿಗದಿಯಾಗುವ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚದ ಹೊಂದಾಣಿಕೆ ಶುಲ್ಕ ದರಕ್ಕೆ ಸಂಬಂಧಿಸಿದ ಸಹಾಯಧನವನ್ನು ಒಳಗೊಂಡಂತೆ ಒಟ್ಟು ಸಹಾಯಧನವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರದಿಂದ ಒದಗಿಸಲಾಗುವುದು.

ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ/ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯಡಿಯ ಫಲಾನುಭವಿಗಳನ್ನು ಗೃಹಜ್ಯೋತಿ ಯೋಜನೆಯಡಿ ಸೇರಿಸಿ ಇಂದು ಹೊಸ ಆದೇಶ ಹೊರಡಿಸಲಾಗಿದೆ.

ಗೃಹಜ್ಯೋತಿ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ 2023ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಕೆಳಕಂಡ ಷರತ್ತುಗಳೊಂದಿಗೆ ಜಾರಿಗೆ ತರಲು ಆದೇಶಿಸಿದೆ.

1.ಈ ಯೋಜನೆಯು ಗೃಹಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
2. ಪ್ರತಿ ತಿಂಗಳ ಮಿಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.

3.ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್‌ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್​ ನೀಡುವುದು ಹಾಗೂ ಗ್ರಾಹಕರು ನೆಟ್​ ಬಿಲ್​ ಪಾವತಿಸಲು ನಿರ್ಧರಿಸಲಾಗಿದೆ
4.ಅರ್ಹ ಯೂನಿಟ್ ಅಥವಾಾ  ಮೊೊತ್ತ್ತಆಗಿದ್ದ ಬಿಲ್ಲನ್ನು ನೀಡಲಾಗುವುದು.
5. ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
6. ಪ್ರತಿ ಫಲಾನುಭವಿಯು ತನ್ನ ಕಸ್ಟಮರ್​ ಐಡಿ ಹಾಗೂ ಅಕೌಂಟ್​ ಐಡಿಯನ್ನು ಆಧಾರ್‌ಗೆ ಜೋಡಣೆ ಮಾಡುವುದು ಕಡ್ಡಾಯ.
7. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹಜ್ಯೋತಿ ಯೋಜನೆಯಡಿಯಲ್ಲಿ ಸೇರಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: Maharashtra: ಎಲ್ಲಾ ವಿಷಯಗಳಲ್ಲೂ 35 % ಪಡೆದು ಪಾಸಾಗಿ ಸುದ್ದಿಯಾದ ಎಸೆಸೆಲ್ಸಿ ವಿದ್ಯಾರ್ಥಿ; ಹೇಳತೀರದ ಹೆತ್ತವರ ಸಂಭ್ರಮ ! 

Leave A Reply

Your email address will not be published.